Showing 20 of 3348 posts • Page 29 of 168
ಭಟ್ಕಳ ಕಪ್ಪೆಚಿಪ್ಪು ದುರಂತ ಪ್ರಕರಣ ನಡೆದಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.
ಭಟ್ಕಳ ಕಪ್ಪೆ ಚಿಪ್ಪು ದುರಂತ ಪ್ರಕರಣ ನಡೆದಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಹಾಗೂ ನಾಗರತ್ನ ಈಶ್ವರ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿದರು.
ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ನಗರದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲಕನಿಗೆ ಚಾಕು ತೋರಿಸಿ ಹಲ್ಲೆ ನಡೆಸಲಾಗಿದೆ. ಪೂಜಾ ಬೇಕರಿ ಮಾಲಕ ಮುರಳಿಧರ ಹಲ್ಲೆಗೆ ಒಳಗಾದವರು.
ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರುವಿನಲ್ಲಿ ನಡೆದಿದೆ.
ಮಟ್ಟು ಗ್ರಾಮಕ್ಕೆ ಸ್ವಾಗತ ಕೋರುವ ಮಟ್ಟುಗುಳ್ಳದ ಪ್ರತಿಕೃತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ನಗರದ ಹೃದಯ ಭಾಗದಲ್ಲೇ ವರ್ಷಗಳಿಂದ ತೆರೆದಿರುವ ಬೃಹತ್ ಗಾತ್ರದ ಗುಂಡಿಯೊಂದು ಇದೀಗ ಮತ್ತೊಮ್ಮೆ ಭಾರೀ ಆತಂಕಕ್ಕೆ ಕಾರಣವಾಗಿದೆ.
ನಿರ್ಮಾಣ ಹಂತದ ಬಾವಿ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಎಂಬಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ.
ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಕೋಟ ಸಮೀಪದ ನಾಗರಮಠ ಮರಳು ದಕ್ಕೆಯಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಗಂಭೀರ ಸ್ವರೂಪ ಪಡೆದಿದೆ.
ಒಂದೆಡೆ ಕಟ್ಟಡದ ತುದಿಯಿಂದ ಆಕಾಶಕ್ಕೇರಿದ ದಟ್ಟ ಹೊಗೆ, ಮತ್ತೊಂದೆಡೆ ಕಿವಿಗೆ ಬಿದ್ದ ಎಚ್ಚರಿಕೆಯ ಸೈರನ್ ಶಬ್ದ. ದಿಕ್ಕಾಪಾಲಾಗಿ ಓಡಾಡುತ್ತಿರುವ ಜನರು, ಕ್ಷಣಕ್ಕೊಂದು ಆತಂಕದ ವಾತಾವರಣ.
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಪ್ರಥಮ ಬಾರಿಗೆ ವಿಪ್ರಬಾಂಧವರಿಗಾಗಿ ‘ಜಿಲ್ಲಾಮಟ್ಟದ ಭಜನಾ ಸ್ಪರ್ಧೆ’ಯನ್ನು ಮೇ 24ರಂದು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ನ ವಿಷ್ಣುಪ್ರಸಾದ್ ಪಾಡಿಗಾರ್ ತಿಳಿಸಿದ್ದಾರೆ.
ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ.
ಕರ್ನಾಟಕ ಕರಾವಳಿಯಲ್ಲಿ ಪೂರ್ವ ಮುಂಗಾರು ಆರಂಭದ ಲಕ್ಷಣಗಳು ಕಾಣಿಸಿಕೊಂಡಿವೆ.
ಆನ್ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ಸೇವೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಉಡುಪಿ ಜಿಲ್ಲೆಯಾದ್ಯಂತ ಇಂದು ಮೆಡಿಕಲ್ ಬಂದ್ ನಡೆಸಲಾಗಿದೆ. ಜಿಲ್ಲೆಯ 650ಕ್ಕೂ ಅಧಿಕ ಮೆಡಿಕಲ್ ಅಂಗಡಿಗಳು ಬಂದ್ನಲ್ಲಿ ಭಾಗವಹಿಸಿವೆ.
ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಅಕ್ರಮ ದನ ಸಾಗಣೆ ಮತ್ತು ಪ್ರಾಣಿ ಹಿಂಸೆ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ಪಡುಬಿದ್ರಿ ಪೊಲೀಸರು ಭಾನುವಾರ ಬೆಳಗಿನ ಜಾವ ಪಡುಬಿದ್ರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಡೆಸಲಾಗಿದೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್ (26) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಸೋಮವಾರ ಬಂಧಿಸಲಾಗಿದೆ.
ಕೊಡವೂರುದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿರುವ ಮಹಾರುದ್ರಯಾಗದ ಕೊನೆಯ ದಿನವಾದ ಮಂಗಳವಾರ ದೇವಸ್ಥಾನ ಪರಿಸರ ಭಕ್ತಸಾಗರಕ್ಕೆ ಸಾಕ್ಷಿಯಾಯಿತು.