Showing 20 of 3348 posts • Page 3 of 168
ಹೆಬ್ರಿ ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಳಂಜೆ ದೊಡ್ಡಮನೆ ಗಣೇಶ್ ಶೆಟ್ಟಿ ಅವರ ಮನೆಯ ಹಟ್ಟಿಯ ಹಿಂಭಾಗದಲ್ಲಿ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ.
ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
‘ಉಡುಪಿಯ ರಾಜ’ ಖ್ಯಾತಿಯ ಕಡಿಯಾಳಿ ಉಡುಪಿ ಸಾರ್ವಜನಿಕ ಗಣೇಶೋತ್ಸವದ ಸಂಕಷ್ಟಹರ ಗಣಪತಿ ವಿಗ್ರಹದ ಜಲಸ್ತಂಭನ ಮಲ್ಪೆ ಕಡಲ ಕಿನಾರೆಯಲ್ಲಿ ನೆರವೇರಿತು.
ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಡೆದಿರುವ ನಿರಂತರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತರ ಭೂಮಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (DHS) ರಾಜ್ಯ ಸಮಿತಿ ಕರೆ ನೀಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಜಗನ್ನಾಥ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಜಗನ್ನಾಥ ದಾಸರ ಕೃತಿಗಳ ಮೆರವಣಿಗೆ ರಥಬೀದಿಯಲ್ಲಿ ನಡೆಯಿತು.
ಉಡುಪಿ ಜಿಲ್ಲಾಡಳಿತ, ಕಾಪು ಪುರಸಭೆ, ಸ್ವಚ್ಛಂ ವಾಟರ್ ಅಡ್ವೆಂಚರ್, ವಿವಿಧ ಸಂಘ–ಸಂಸ್ಥೆಗಳು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳ ಸಹಯೋಗದಲ್ಲಿ ಕಾಪು ಬೀಚ್ನಲ್ಲಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಯಿತು.
ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ.
ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ 2026ನೇ ಸಾಲಿನ ‘ಅಧ್ಯಾಪಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ಮಧ್ಯಾಹ್ನ 2ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಉಡುಪಿ: ಸಂಶೋಧಕ ಆರ್. ಮನೋಹರ್ ಅವರು ಆವಿಷ್ಕರಿಸಿರುವ ಅಗ್ಗದ 200 ಎಕ್ಸ್ ಹಾಗೂ ಅತ್ಯಂತ ಶಕ್ತಿಶಾಲಿ 240 ಎಕ್ಸ್ ಬೈನಾಕ್ಯುಲರ್ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಲಭಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಮನೋಹರ್, ತಾವು ಅಭಿವೃದ್ಧಿಪಡಿಸಿರುವ ಬೈನಾಕ್ಯುಲರ್ ಎರಡು ಕಣ್ಣಿನಿಂದ ವೀಕ್ಷಿಸಬಹುದಾದ ದೂರದರ್ಶಕವಾಗಿದ್ದು, ಸುಮಾರು 20 ಕಿ.ಮೀ. ದೂರದವರೆಗೆ ವೀಕ್ಷಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು. ಅಗ್ಗದ 200 ಎಕ್ಸ್ ಬೈನಾಕ್ಯುಲರ್ ಹಾಗೂ 240 ಎಕ್ಸ್ ಸಾಮರ್ಥ್ಯದ ಅತ್ಯಂತ ಶಕ್ತಿಶಾಲಿ ಬೈನಾಕ್ಯುಲರ್ ಆವಿಷ್ಕಾರಕ್ಕಾಗಿ […]
ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಘಟಕವೊಂದರಲ್ಲಿ ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
‘ನಾನು ಯಾರಿಗೂ ಉತ್ತರ ಕೊಡಲು ಬಂದಿಲ್ಲ. ಜನರ ಬೇಡಿಕೆ ಹಾಗೂ ಭಾವನೆಗಳನ್ನು ಅವರಿಂದಲೇ ತಿಳಿದುಕೊಳ್ಳಲು ಬಂದಿದ್ದೇನೆ.
ರಾವಳಿ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜತೆಗೆ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಚಿಂತನೆಗಳನ್ನು ರೂಪಿಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಬ್ರಹ್ಮಾವರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹುಲಿವೇಷದ ಊದುಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಭಾಗವಹಿಸಿ ಹುಲಿಕುಣಿತದ ಸೊಬಗನ್ನು ಸವಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಪಡು ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾಣ, ದೇಶದ ಸುಭಿಕ್ಷೆ ಹಾಗೂ ಗ್ರಾಮ–ರಾಷ್ಟ್ರಗಳ ಕ್ಷೇಮಕ್ಕಾಗಿ ಫೆಬ್ರವರಿಯಲ್ಲಿ ಸಹಸ್ರ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಕೃಷ್ಣರಾಜ್ ಭಟ್ ತಿಳಿಸಿದರು.
ಕರಾವಳಿ ಸಚಿವ ಸಂಪುಟ ಸಭೆಯಲ್ಲಿ ರೈತರು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಆಗ್ರಹಿಸಿದೆ.
ಕರಾವಳಿಯ ವಿಶಿಷ್ಟ ಜನಪದ ಆಚರಣೆ ಹಾಗೂ ಕ್ರೀಡೆಯಾಗಿರುವ ಸಾಂಪ್ರದಾಯಿಕ ಕಂಬಳಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿ ಆಗ್ರಹಿಸಿದೆ.