Showing 20 of 3348 posts • Page 30 of 168
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಖಂಡಿಸಿ ಉಡುಪಿ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಹಾಗೂ ಯುವ ಕಾಂಗ್ರೆಸ್ ಸೋಮವಾರ ಮಣಿಪಾಲದ ಟೈಗರ್ ಸರ್ಕಲ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿತು.
ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ.
ಉಡುಪಿ ಶ್ರೀಕೃಷ್ಣಮಠಕ್ಕೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಾರ್ವಜನಿಕ ಅಹವಾಲು ಸಂದರ್ಭದಲ್ಲಿ ಉಡುಪಿಯ ಜನತೆ ಹಾಗೂ ಬಿಜೆಪಿಗೆ ಸೌಹಾರ್ದತೆಯ ಪಾಠ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪೇಚಿಗೆ ಸಿಲುಕಿದ್ದಾರೆ. ವೃದ್ಧ ಹಿಂದೂ ಮಹಿಳೆಯೊಬ್ಬರ ಜಾಗದ ಸಮಸ್ಯೆಗೆ ಮುಸ್ಲಿಂ ಮಹಿಳೆಯರು ಕಣ್ಣೀರು ಹಾಕಿ ಬೇಡಿಕೊಂಡ ಪ್ರಕರಣ, ಬೇರೆಯದೇ ಆಯಾಮ ಪಡೆದಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ ಎಲ್ಲ ಕಷ್ಟಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.
ಕಾಪುವಿನ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದೈವಾರ್ಷಿಕವಾಗಿ ನಡೆಯುವ ಐತಿಹಾಸಿಕ ಪಿಲಿಕೋಲ ಶನಿವಾರ ಸಂಜೆ ಸಂಪನ್ನಗೊಂಡಿತು.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ಬೀಚ್ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು.
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಆಯೋಜಿಸಿರುವ ಮಹಾರುದ್ರಯಾಗದ ಅಂಗವಾಗಿ ಕೊಡವೂರಿನ ಪ್ರಮುಖ ಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.
ಒಂಟಿಯಾಗಿದ್ದ ವೃದ್ಧೆಯ ಸಮಸ್ಯೆ ಹೇಳಿಕೊಂಡು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಅಹವಾಲು ಸಲ್ಲಿಸಲು ಮುಸ್ಲಿಂ ಮಹಿಳೆಯರು ಬಂದಿದ್ದರು.
ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊಪ್ಪಳದಿಂದ ಬಂದ ಪ್ರವಾಸಿಗರ ತಂಡಕ್ಕೆ ₹2,000 ದಂಡ ವಿಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಉಡುಪಿ ಜಿಲ್ಲೆಯನ್ನು ರಾಜ್ಯ ಸರಕಾರ ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗೋ ಬ್ಯಾಕ್ ಹೇಳುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಮನನೊಂದ ವ್ಯಕ್ತಿಯೊಬ್ಬರು ತನ್ನ ಹೆಂಡತಿಯ ಮನೆಯ ಮುಂಭಾಗ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನ ಬೆಳಪುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಿಷ್ಟಾಚಾರ ಪಾಲನೆ ಆಗುತ್ತಿಲ್ಲ ಎಂದು ಜಿಲ್ಲೆಯ ಬಿಜೆಪಿ ಶಾಸಕರುಗಳು ಆರೋಪಿಸಿದ್ದು ಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು.
ಹಿಜಾಬ್ ರಾಜ್ಯ ಸರ್ಕಾರದ ಆದೇಶ ತಂದ ವಿವಾದದ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಕರಾವಳಿಯಲ್ಲಿ ದೇವಸ್ಥಾನಗಳ ಆದಾಯ ಹೆಚ್ಚಳ ಕುರಿತು ಉಡುಪಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.