Showing 20 of 3348 posts • Page 31 of 168
ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಸುಮಾರು 75 ವರ್ಷಗಳ ಬಳಿಕ ಈ ಭಾಗದಲ್ಲಿ ರುದ್ರಯಾಗ ನಡೆಯುತ್ತಿದ್ದು, ಪ್ರಸಾದ್ರಾಜ್ ಕಾಂಚನ್ ಅವರಿಗೆ ಈ ಯೋಗ ದೊರೆತಿದೆ.
ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರನೇ ತರಗತಿಯ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ನೇಜಾರು ಜ್ಯೋತಿನಗರ ಆರನೇ ಕ್ರಾಸ್ ಸಮೀಪ ನಡೆದಿದೆ.
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಗಡಿಪಾರು ಆದೇಶ ಹೊರಡಿಸಿದ್ದಾರೆ.
ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹೊಸ ಎತ್ತರಕ್ಕೆ ಏರಿದೆ. ಧಾರ್ಮಿಕ ಪ್ರವಾಸೋದ್ಯಮ, ಬೀಚ್ ಟೂರಿಸಂ, ದೈವಾರಾಧನೆ ಮತ್ತು ಪ್ರಕೃತಿ ಸೌಂದರ್ಯ ನೋಡಲು ದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ಹರಿದು ಬರುತ್ತಿದ್ದಾರೆ.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಇಂದು ಬೆಳಿಗ್ಗೆಯಿಂದ ರುದ್ರಜಪ, ಉಗ್ರಾಣ ಮುಹೂರ್ತ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ವಿದ್ಯಾರ್ಥಿವೇತನ ಮತ್ತು ಸಹಾಯಧನ ವಿತರಣಾ ಸಮಾರಂಭ ಮೇ 17 ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದಾರ್ತಿಯ ಕರ್ನಾಟಕ ಮರಾಠ ಪರಿಷತ್ ನಿವೇಶನದಲ್ಲಿ ನಡೆಯಲಿದೆ ಎಂದು ಪರಿಷತ್ ನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ಶ್ನೆಪತ್ರಿಕೆ ಸೋರಿಕೆ ಮತ್ತು ಭಾರೀ ಅಕ್ರಮಗಳಿಂದಾಗಿ ನೀಟ್-ಯುಜಿ ಪರೀಕ್ಷೆ ರದ್ದಾಗಲು ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಎನ್ಎಸ್ಯುಐ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಸೌರಭ್ ಬಲ್ಲಾಳ್ ಆರೋಪಿಸಿದರು.
ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.
ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.
ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಚಿನ್ನ ಖರೀದಿ ಮಾಡಬೇಡಿ ಎಂದು ಭಾರತೀಯರಲ್ಲಿ ಮನವಿ ಮಾಡಿದ್ದು ಸಾಕಷ್ಟು ಚರ್ಚೆಗೆ ಈಡಾಗಿತ್ತು.
ಉಡುಪಿ ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಐದು ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯು ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ.
ಆಧಾರಸ್ಥಂಬ ಕಳೆದುಕೊಂಡು ಮಗನೊಂದು ಜೀವನ ನಡೆಸುತ್ತಿದ್ದ ಪಳ್ಳಿ ಕನ್ನಡಿಬೈಲು ಸುಮಿತ್ರ ದಿನೇಶ ಆಚಾರ್ಯ ಎರ್ಮಾಲು ಅವರಿಗೆ “ಸಮಾನ ಮನಸ್ಕರ ತಂಡ ಉಡುಪಿ” ನಿರ್ಮಿಸಿಕೊಟ್ಟ ಮನೆಯನ್ನು ಹಸ್ತಾಂತರಿಸಲಾಯಿತು.
ನಮ್ಮ ಸಿನಿಮಾದ ಭಾಷೆ ನಾಟ್ಯ ಶಾಸ್ತ್ರದ ಭಾಷೆಯಾಗಿದೆ. ತಾರತಮ್ಯ, ಕೊಳ್ಳುತನ, ಪ್ರಚಾರ, ಧರ್ಮ, ಜಾತಿಗಳ ಶ್ರೇಣೀಕರಣದಿಂದಾಗಿ ಭಾರತೀಯ ಸಿನಿಮಾಗಳು ಧರ್ಮ ಕೇಂದ್ರೀಕೃತವಾಗಿವೆ.
ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿಯಿಂದ ಇರಿದ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ನಡೆದಿದೆ.
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಉದ್ಯೋಗ ಮೇಳದ ಅಧ್ಯಕ್ಷೆ ಡಾ.ದಿವ್ಯಾ ರಾಣಿ ಹೇಳಿದರು.