Showing 20 of 3348 posts • Page 33 of 168
ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.
“ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು.
ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.
ಸಮುದ್ರದಿಂದಾಗಿ ಕರಾವಳಿ ಪ್ರದೇಶದ ವಾತಾವರಣದಲ್ಲಿ ತೇವಾಂಶ (ಹ್ಯುಮಿಡಿಟಿ) ಹೆಚ್ಚು ಇರುತ್ತದೆ. ಆದುದರಿಂದ ಇಲ್ಲಿನ ವಾತಾವರಣಕ್ಕೆ ಏರ್ ಕೂಲರ್ಗಿಂತ ಏರ್ ಕಂಡೀಷನರ್ ಅತೀ ಸೂಕ್ತವಾಗಿದೆ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು.
ಜಿಲ್ಲೆಯಲ್ಲಿ ತೀವ್ರ ಉರಿ ಬಿಸಿಲಿನ ಪರಿಣಾಮ ಈಗ ಜಲಮೂಲಗಳ ಮೇಲೂ ಸ್ಪಷ್ಟವಾಗಿ ಕಾಣಿಸುತ್ತಿದೆ. ಜಿಲ್ಲೆಯ ಜೀವನಾಡಿಯಾದ ಸ್ವರ್ಣ ನದಿಯ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಅಭಾವದ ಆತಂಕ ಮೂಡಿಸಿದೆ.
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಎಚ್ಎಂಸಿ ಯುನೈಟೆಡ್ ಟ್ರೋಫಿ 2026ಕ್ಕೆ ಕೆಲವು ಕಿಡಿಗೇಡಿಗಳ ಒಳಸಂಚಿನಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡು ವಿವಾದಕ್ಕೀಡಾಗಿತ್ತು.
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ–ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ.
ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಯ ಹೊಸ ಶ್ರೇಷ್ಠತಾ ಕೇಂದ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಅನಾವರಣಗೊಳಿಸಿದರು.
ಶ್ರೀರಥಬೀದಿ- ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು.
ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ.
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಸಮೀಪ ಏಪ್ರಿಲ್ 24ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 27ರಂದು ನಿಧನ ಹೊಂದಿದ್ದಾರೆ.
ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ಪೊಲೀಸ್ ಇಲಾಖೆ, ಉಡುಪಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಾಚರಣೆ ನಡೆಸಿದೆ.
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.
ವಿಶ್ವದ ಜನಪ್ರಿಯ ನಾಯಕ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಗರದ ಮಧ್ಯಭಾಗದಲ್ಲಿರುವ ಖಾದರ್ ವಾಣಿಜ್ಯ ಸಂಕೀರ್ಣದಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಪ್ಲಾಸ್ಟಿಕ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಆರಕ್ಕೂ ಹೆಚ್ಚು ಅಂಗಡಿಗಳನ್ನು ಸಂಪೂರ್ಣ ಭಸ್ಮಗೊಳಿಸಿದೆ.