Showing 20 of 3348 posts • Page 35 of 168
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಉದ್ಘಾಟಿಸಲಾಯಿತು.
ಯಾನ್ ತುಳುವಪ್ಪೆನ ಮಗೆ, ಎನ್ನ ಬಾಲ್ಯ ಜೀವನ, ಬಾಲ್ಯ ಶಿಕ್ಷಣ ಈ ತುಳುನಾಡ್ ಮನ್ಸ್ ಡೇ. ಯಾನ್ ತುಳುನಾಡುದಾಯೆ.. ಯಾನ್ ಪುಟ್ಟುದಿನಿ ಎಂದು ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು. ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಸೋಸಿಯೇಷನ್ ಗೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಡೆಯಲಿದೆ.
ಇಲ್ಲಿನ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು.
ಮಕ್ಕಳ ಮೊಬೈಲ್ ಗೀಳಿನಿಂದ ಸಮಾಜದಲ್ಲಿ ಅನೇಕ ದುಷ್ಪರಿಣಾಮಗಳು ಆಗುತ್ತಿವೆ. ಈ ನಿಟ್ಟಿನಲ್ಲಿ ಸರಕಾರವು ಮಕ್ಕಳು ಅತಿಯಾಗಿ ಮೊಬೈಲ್ ಬಳಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುತ್ತಿದೆ.
ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಹೇಳಿದರು.
ಲೋಕ ಕಲ್ಯಾಣಾರ್ಥವಾಗಿ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಸೇವಾಕರ್ತರಾಗಿರುವ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿನ್ನೆ ನಿಧನರಾದರು. ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
ಮಹಾರುದ್ರ ದೇವರನ್ನು ನಾವು ಭಕ್ತಿಯಿಂದ ಆರಾಧಿಸುವುದರಿಂದ ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಲು ಸಾಧ್ಯವಿದೆ ಎಂದು ಎಂದು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಿಳಿಸಿದರು.
ಉಡುಪಿ ಪೊಲೀಸರ ಭದ್ರ ಸರ್ಪಗಾವಲಿನಲ್ಲಿ ಕಳೆದ 15 ದಿನಗಳಿಂದ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಹಾಗೂ ಅಕ್ರಮ ಮರಳುಗಾರಿಕೆಯಿಂದ ತಮ್ಮ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮರಳುಗಾರಿಕೆಯನ್ನು ನಿಲ್ಲಿಸಿ ಸಂತ್ರಸ್ಥರಾಗಿರುವ ಗ್ರಾಮದ 150ಕ್ಕೂ ಅಧಿಕ ಮಂದಿಯನ್ನು ರಕ್ಷಿಸುವಂತೆ ಆಗ್ರಹಿಸಿ ನಾಗರಮಠದ ಕೃಷಿಕರು ಹಾಗೂ ಸಂತ್ರಸ್ಥರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ “ಭೀಮ್ ಜಯಂತೋತ್ಸವ”ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬನ್ನಂಜೆಯ ಇತಿಹಾಸ-ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬುಧವಾರ ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ.
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ತಿಳಿಸಿದರು.