Showing 20 of 3348 posts • Page 36 of 168
ಇಂದು ಸೌರಮಾನ ಯುಗಾದಿ. ಉಡುಪಿ ಜಿಲ್ಲೆಯಲ್ಲಿ ವೈದಿಕ ಮತ್ತು ಜನಪದ ಸಂಪ್ರದಾಯದಂತೆ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯ್ತು. ಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಪಂಚಾಂಗ ಶ್ರವಣ, ಮಹೋತ್ಸವ ಜರುಗಿತು.
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಉಷ್ಣತೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಪರ್ಕಳ ಸಮೀಪದ ದೇವಸ್ಥಾನಬೆಟ್ಟು ನಿವಾಸಿ, ತಾಸೆ ನುಡಿಸುವ ಕಲಾವಿದ ಅವಿನಾಶ್ ಸೇರಿಗಾರ ( 33 ) ಅನಾರೋಗ್ಯದಿಂದ ನಿಧನರಾದರು.
ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಬೋರ್ಗಲ್ಲುಗುಡ್ಡೆ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದೆ.
ಕಾಂತಾರ ಚಲನಚಿತ್ರ ಬಿಡುಗಡೆಯಾದ ನಂತರ ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ನಡೆಯುತ್ತಾ ಬಂದಿರುವ ದೈವದ ಕೋಲಗಳಿಗೆ ಹೊಸ ಆಯಾಮ ದೊರಕಿದೆ. ದೇಶದ ಮೂಲೆ ಮೂಲೆಗಳಿಂದ ಮಾತ್ರವಲ್ಲ, ವಿದೇಶಗಳಿಂದಲೂ ಜನ ದೈವದ ಕೋಲ ನೋಡಲು ಬರುತ್ತಿದ್ದಾರೆ.
ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ ತಿಳಿಸಿದ್ದಾರೆ.
ಇತ್ತೀಚೆಗೆ ಯುವಕನೊಬ್ಬ “ಝಾಂಬಿ ಡ್ರಗ್ಸ್” ಸೇವಿಸಿದಂತೆ ವರ್ತಿಸಿರುವ ವಿಡಿಯೋ ವೈರಲ್ ಆಗಿತ್ತು.ಇದು ಸಾಕಷ್ಟು ಆತಂಕಕ್ಕೂ ಕಾರಣ ಆಗಿತ್ತು. ಬಳಿಕ ಸ್ಪಷ್ಟನೆ ನೀಡಿದ್ದ ಗೃಹ ಸಚಿವರು ,ಝಾಂಬಿ ಡ್ರಗ್ಸ್ ಬಗ್ಗೆ ವದಂತಿ ಹಬ್ಬುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು , ಮಾತ್ರವಲ್ಲ ಓರ್ವ ಯುವಕನನ್ನು ಈ ಸಂಬಂಧ ಬಂಧಿಸಲಾಗಿತ್ತು ಕೂಡ.
ಶ್ರೀರಾಮ ಟಂಕ ಜಪ ಅಭಿಯಾನ ಎ.14ರಂದು ಶ್ರೀಕೃಷ್ಣಮಠ ಸಮೀಪದ ಗೀತಾಮಂದಿರದಲ್ಲಿ ನಡೆಯಲಿದೆ ಎಂದು ಅಭಿಯಾನ ಪ್ರವರ್ತಕ ಮಂಜುನಾಥ ಕುಡ್ವ ಮಂಗಳೂರು ತಿಳಿಸಿದ್ದಾರೆ.
ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.
ಮಣಿಪಾಲದಲ್ಲಿ ನಡೆದ ವ್ಯಕ್ತಿಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಚೋದನೆ ಕೇಸ್ ನ್ನು ತಂದೆ ದಾಮೋದರ ಶೆಟ್ಟಿ ದಾಖಲಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನಲೆ ಕಾರ್ಕಳದಲ್ಲಿ ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್ ಮಾಡಲಾಗಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ನುಡಿದಂತೆ ನಡೆದ ಸರಕಾರ.ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ.ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪಂಚ ಗ್ಯಾರಂಟಿ ಫಲಾನುಭವಿಗಳು ಇದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ.
ನಗರದಲ್ಲಿ ಹರಿಯುವ ಇಂದ್ರಾಣಿ ನದಿಯು ಎಲ್ಲೆಲ್ಲಿ ಕಲುಷಿತವಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಲು ಡ್ರೋನ್ ಸರ್ವೆ ನಡೆಸುವ ಚಿಂತನೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಪರೂಪದ ಯಾಗ ನಡೆಯುತ್ತಿದೆ.
ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿ ಬಂದಿರುವ ರಂಜಿತ್ ಸಿ. ಬಜಾಲ್ ನಿರ್ದೇಶನದ “90 ML” ತುಳು ಸಿನಿಮಾ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ತಿಳಿಸಿದ್ದಾರೆ.
ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.
ಸಾರ್ವಜನಿಕರ ಬಹುದಿನಗಳ ಬೇಡಿಕೆ ಭಾಗಶಃ ಈಡೇರಿದೆ. ಜಿಲ್ಲೆಯ ಕಟಪಾಡಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಡರ್ ಪಾಸ್ ಕಾಮಗಾರಿ ವೇಗ ಪಡೆದುಕೊಂಡಿದೆ. ಈ ಭಾಗದಲ್ಲಿ ಅಂಡರ್ ಪಾಸ್ ಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ನಡೆದಿತ್ತು.