Showing 20 of 3078 posts • Page 37 of 154
ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿಯ ಉದ್ಯಾವರದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರ್ಹಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದಿರುವುದಾಗಿ ವರದಿಯಾಗಿದೆ.
ತುಳುನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಗುರುತಿಸಿದ ಕಂಬಳ ಕೂಟಕ್ಕೂ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಬಳ ಸಂಘಟಕರಿಗೆ ಚಿನ್ನದ ಬೆಲೆ ಏರಿಕೆ ಹೊರೆಯಾಗುತ್ತಿದೆ. ಪ್ರತಿ ಕಂಬಳ ಕೂಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬಹುಮಾನ ನೀಡಲಾಗುತ್ತದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದರಿಂದ ಕರಾವಳಿಯ ಕಂಬಳ ಕೂಟದಲ್ಲಿ ಇನ್ನೂ ಚಿನ್ನ ನೀಡುತ್ತಾರಾ..? ಇಲ್ಲವಾ..? ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕಂಬಳ ಸಮಿತಿಯ ರಾಜ್ಯಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ಪಷ್ಟಣೆ ನೀಡಿದ್ದಾರೆ.
ನಡುರಸ್ತೆಯಲ್ಲಿ ಕುಣಿದು, ಪಟಾಕಿ ಸಿಡಿಸಿ ನಡುರಸ್ತೆಯಲ್ಲಿಯೇ ಹುಚ್ಚಾಟ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.
ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ.
ಹಿರಿಯಡಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಾಲಯದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗ್ರಾಹಕರ ಸಮಾವೇಶವನ್ನು ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಡುಪಿ ನಗರದ ಹೃದಯ ಭಾಗದಲ್ಲಿ ರಾತ್ರಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪುಡಿ ರೌಡಿಗಳಂತೆ ಪಾನಮತ್ತರಾಗಿ ಹೊಡೆದಾಡಿಕೊಂಡು ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಆಪ್ತನ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯಿಂದ ಉಡುಪಿಯ ಜನತೆ ಭಯಭೀತರಾಗಿದ್ದು,
ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ.
ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು ದಾಖಲೆಪತ್ರಗಳನ್ನು ಕಳುವುಗೈದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ.
ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಸಹಸವಾರೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.
ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೋಪ್ ಲಿಯೋ XIV ಅವರು ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತಾ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.