Showing 20 of 3085 posts • Page 38 of 155
ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ.
ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು ದಾಖಲೆಪತ್ರಗಳನ್ನು ಕಳುವುಗೈದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ.
ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಸಹಸವಾರೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.
ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೋಪ್ ಲಿಯೋ XIV ಅವರು ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತಾ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ (ಭಾನುವಾರ) ಒಂಭತ್ತನೆಯ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕರಾವಳಿ ಜನರಿಂದ ಬಹಳಷ್ಟು ನಿರೀಕ್ಷೆಗಳಿವೆ.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣಚಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.
ಸುಮಾರು 3-4 ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅವಕಾಶ ಸಿಗುತ್ತಿಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಹತೆ ಇರುವ ಬಡವರು ಅದನ್ನು ನಂಬಿಕೊಂಡು ಬದುಕುವವರು ಅವಕಾಶ ಇಲ್ಲದೆ ಪಡಿತರಕ್ಕೆ ಆಗಲಿ ವೈದ್ಯಕೀಯ ಚಿಕಿತ್ಸೆಗೆ ಶಿಕ್ಷಣಕ್ಕೆ ಹಾಗೂ ಮೂಲಭೂತ ಸೌಕರ್ಯ ಪಡೆಯಲು ತುಂಬಾ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.
ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೋರ್ವ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿದೆ.
ನೇಚರ್ ಎವೇರ್ನೆಸ್ ಫೌಂಡೇಶನ್ ಟ್ರಸ್ಟ್, ಲಕ್ಷ್ಮೀನಗರ ಇದರ ಉದ್ಘಾಟನಾ ಸಮಾರಂಭವು ಫೆ.1ರಂದು ಉಡುಪಿ ಪುತ್ತೂರಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಕೃಷ್ಣ ಆಚಾರ್ಯ ತಿಳಿಸಿದರು.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸಿಗುವ ಧನ ಸಹಾಯ ಮತ್ತು ಇತರ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಾಗಾರವನ್ನು ಫೆ.2ರಂದು ಸಂಜೆ 4ಗಂಟೆಗೆ ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ ತಿಳಿಸಿದರು.
ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ.
ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ ವೈಭವದಿಂದ ನಡೆಯುತ್ತಿದೆ.
ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಸೇರಿದಂತೆ ಎಲ್ಲಾ ಬಸ್ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.