Showing 20 of 3348 posts • Page 39 of 168
ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದ ಯುವಕನೋರ್ವ ತಪಾಸಣಾಧಿಕಾರಿಯ ಸಮಯಪ್ರಜ್ಞೆಯಿಂದ ಬದುಕುಲಿದ ಘಟನೆ ಉಡುಪಿಯ ಇನ್ನಂಜೆಯಲ್ಲಿ ನಡೆದಿದೆ.
ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಅವರ ನಿಗೂಢ ಸಾವು ಈಗ ಕರಾವಳಿಯಾದ್ಯಂತ ಭಾರಿ ಚರ್ಚೆಗೆ ಮತ್ತು ಹಲವು ಸಂಶಯಗಳಿಗೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಸೋಶಿಯಲ್ ಮೀಡಿಯಾ ಮೂಲಕ ಪ್ರೀತಿಸಿ, ಎರಡೂ ಕುಟುಂಬಗಳನ್ನು ಒಪ್ಪಿಸಿ ಕಳೆದ ಫೆಬ್ರವರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ ಸುದೀಪ್ ಮತ್ತು ಕಾರ್ಕಳದ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿ ಅವರ ಜೀವನದಲ್ಲಿ ಒಂದೇ ತಿಂಗಳೊಳಗೆ ಬಿರುಗಾಳಿ ಎದ್ದಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎಪ್ರಿಲ್ 1ರಂದು ಬೆಳಿಗ್ಗೆ 10ರಿಂದ 5ಗಂಟೆಯವರೆಗೆ ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯಕೊಡವೂರು ತಿಳಿಸಿದರು.
ಸಂತೆಕಟ್ಟೆ ಮೇಲ್ಸೇತುವೆ ಲೋಕಾರ್ಪಣೆಗೊಂಡಿದ್ದು, ಸಾರ್ವಜನಿಕ ಬಳಕೆಗೆ ಇಂದಿನಿಂದ ಮುಕ್ತ ಎಂದು ಸಂಸದ ಕೋಟ ಅವರು ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ವಿವಿಧಡೆ ಶನಿವಾರ ರಾತ್ರಿ ಏಕಾಏಕಿ ಮಳೆ ಸುರಿದಿದೆ. ಈ ಅನಿರೀಕ್ಷಿತ ಮಳೆಯಿಂದ ಜನ ಕಂಗಲಾಗಿದ್ದಾರೆ. ಸುರಿಯುವ ಮಳೆಯಲ್ಲೇ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ರಥೋತ್ಸವ ನಡೆದಿದೆ.
ನಗರದಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇದರಿಂದ ವಾಹನ ಸವಾರರು ತೀರಾ ತೊಂದರೆ ಅನುಭವಿಸುವಂತಾಯಿತು.
ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ‘ಗರಿಗಳ ಭಾನುವಾರ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ‘ಪಾಮ್ ಸಂಡೆ’ಯನ್ನು ಜಿಲ್ಲಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಶನಿವಾರ ಸಂಜೆ ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದನು.
ಹೆಮ್ಮಾಡಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಡುವೆ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೇ ನಾನಾ ಭಂಗಿಯಲ್ಲಿ ‘ಸರ್ಕಸ್’ ಮಾಡಿದ್ದ ಪುಂಡನ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಪರಿಶೀಲಿಸಿದ ಕುಂದಾಪುರ ಸಂಚಾರ ಠಾಣೆ ಪೊಲೀಸರು ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅನಂತೇಶ್ವರ ದೇವಾಲಯದಲ್ಲಿ ರಾಮೋತ್ಸವದ ಪ್ರಯುಕ್ತ ರಥೋತ್ಸವ ಜರಗಿತ್ತು ಇದರ ಅಂಗವಾಗಿ ದೇವರಿಗೆ ಆರತಿಯನ್ನು ಬೆಳಗುದರ ಮೂಲಕ ರಥೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.
ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಉಪ ನೊಂದಣಿ ಕಚೇರಿಗಳು ಮಾರ್ಚ್ 28 ಮತ್ತು 29 ರಂದು ಕರ್ತವ್ಯ ನಿರ್ವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,
ಯಕ್ಷಗಾನದ ನಡುವಲ್ಲಿ ಪ್ರೇಕ್ಷಕರಿಗೆ ಕಲಾವಿದ ಕ್ಲಾಸ್ ತೆಗೆದುಕೊಂಡ ಘಟನೆ ಧರ್ಮಸ್ಥಳ ಮೇಳದ ಯಕ್ಷಗಾನ ಪ್ರಸಂಗದಲ್ಲಿ ಕುಂದಾಪುರದ ಹೆನ್ನಾಬೈಲಿನಲ್ಲಿ ನಡೆಯುತ್ತಿದ್ದ ಪ್ರದರ್ಶನದಲ್ಲಿ ನಡೆದಿದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಬೆಳೆಯುತ್ತಿರುವ ನಗರ ಪ್ರದೇಶದಲ್ಲಿ ಸದ್ಯ ಅತಿ ದೊಡ್ಡದಾಗಿ ಕಾಣುತ್ತಿರುವ ಸಮಸ್ಯೆ ಎಂದರೆ ಅದು ತ್ಯಾಜ್ಯ ವಿಲೇವಾರಿ ಸಮಸ್ಯೆ. ಸದ್ಯ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದ್ಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಮತ್ತೆ ಎರಡನೇ ಬಾರಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಕ್ಯಾಶ್ ಟೇಬಲ್ ನಲ್ಲಿದ್ದ ಮಾಲೀಕನ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್ ನಲ್ಲಿ ನಡೆದಿದೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.