Showing 20 of 3348 posts • Page 4 of 168
ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ (ಕೆಸಿಎಸ್ಸಿ) ಉಡುಪಿ ಸಂಸ್ಥೆಯ 32ನೇ ವಾರ್ಷಿಕೋತ್ಸವ ಹಾಗೂ ಓಣಂ ಹಬ್ಬ ಆಚರಣೆ
ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.
ರಾಧಾಕೃಷ್ಣ ನೃತ್ಯ ನಿಕೇತನದ ಸಂಸ್ಥಾಪಕ, ನೃತ್ಯ ಕಲಾಸಿಂಧು ಕೀರ್ತಿಶೇಷ ರಾಧಾಕೃಷ್ಣ ತಂತ್ರಿ ಅವರ 91ನೇ ಜನ್ಮದಿನದ ಸ್ಮರಣಾರ್ಥವಾಗಿ ಸೆ.19ರಂದು ‘ನೃತ್ಯಾಭಿಷೇಕಂ’ ಕಾರ್ಯಕ್ರಮ
ರಾಜ್ಯದ ನೂತನ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರಾವಳಿ ಭಾಗಕ್ಕೆ ಭೇಟಿ ನೀಡಿದ ಇಲಾಖಾ ಸಚಿವ ಕೆ.ಎಸ್ ಬಸವಂತಪ್ಪ ಇಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್ಗಳ ಪೈಪೋಟಿ ನಡುವೆ ವ್ಯವಹಾರ ನಡೆಸುವುದು ಕಷ್ಟವಾಗಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಕರಾವಳಿಯ ಕೃಷಿ ಪರಂಪರೆಯ ಹೆಮ್ಮೆಯ ಮಟ್ಟುಗುಳ್ಳ ಬದನೆಕಾಯಿ ಬೆಳೆ ಈ ಬಾರಿ ಸಂಕಷ್ಟಕ್ಕೆ ಸಿಲುಕಿದೆ.
ಕರಾವಳಿಯ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ತುಳು ಭಾಷೆಯ ವಿಚಾರದಲ್ಲಿ ಇನ್ನೆಷ್ಟು ವರ್ಷ ಭರವಸೆ ಕೇಳಬೇಕು? ಇನ್ನು ಭರವಸೆ ಬೇಡ, ಸ್ಪಷ್ಟ ನಿರ್ಧಾರ ಬೇಕು.
ಮಣಿಪಾಲದ ಲೇಕ್ವ್ಯೂ ಕಟ್ಟಡದಲ್ಲಿರುವ ಜನರಲ್ ಸ್ಟೋರ್ವೊಂದರಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ನಡೆದಿದೆ.
ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವಿನಾಯಕ ಚೌತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಿದ್ದ ಸಂದರ್ಭವನ್ನು ಬಳಸಿಕೊಂಡು ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೋಟ ವ್ಯಾಪ್ತಿಯ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.
ಇಂದ್ರಾಳಿ ನಿವಾಸಿ, ಕೊಡಂಕೂರು ಜಯರಾಮ ಶೆಟ್ಟಿ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಟೂರಿಸ್ಟ್ ಬಸ್ ಮತ್ತು ಸರ್ವಿಸ್ ಬಸ್ ಏಜೆಂಟರು, ಸರ್ವಿಸ್ ಬಸ್ ನಿಲ್ದಾಣ, ಉಡುಪಿ ವತಿಯಿಂದ ಸರ್ವಿಸ್ ಬಸ್ ನಿಲ್ದಾಣದಲ್ಲಿ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ ಹಸ್ತ ಚಾಚುವ ಮನುಷ್ಯರ ರೂಪದಲ್ಲಿಯೇ ದೇವರು ಬರುತ್ತಾನೆ. ಇತರರಿಗೆ ಒಳಿತನ್ನು ಬಯಸುವ ಮತ್ತು ಸಹಾಯ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ನಾವು ದೇವರನ್ನು ಕಾಣಬಹುದು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.
ಮನೆ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಅಮಾಸೆಬೈಲು ಹಾಗೂ ಶಂಕರನಾರಾಯಣ ಪೊಲೀಸರು ಬಂಧಿಸಿದ್ದು, ಅವರಿಂದ ₹1,19,720 ನಗದು ವಶಪಡಿಸಿಕೊಂಡಿದ್ದಾರೆ.
ಗಣೇಶೋತ್ಸವ ಬಂದರೆ ಸಾಕು ಉಡುಪಿಯ ಅಲೆವೂರಿನ ನಿವೃತ್ತ ಶಿಕ್ಷಕ ಶೇಖರ ಕಲ್ಮಾಡಿ ಅವರ ಮನೆಯಂಗಳದಲ್ಲಿ ವಿವಿಧ ವಿನ್ಯಾಸದ ಗಣಪತಿ ಮೂರ್ತಿಗಳ ನಿರ್ಮಾಣದ ಚಟುವಟಿಕೆ ಗರಿಗೆದರಿದೆ.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025–26ನೇ ಸಾಲಿನಲ್ಲಿ ₹15.09 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡುವುದಾಗಿ ಘೋಷಿಸಿದೆ.
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.