Showing 20 of 3085 posts • Page 40 of 155
ತಿಂಗಳೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡಮಾಡುವ ತಿಂಗಳೆ ಪ್ರಶಸ್ತಿಗೆ ಈ ಬಾರಿ ಶಿಕ್ಷಕ, ಶಾಲಾ ಯಕ್ಷಶಿಕ್ಷಣ ಸಂಘಟಕ, ಸಮಾಜ ಸೇವಕ, ಕಲಾರಂಗದ ಪ್ರ.ಕಾರ್ಯದರ್ಶಿ ಮುರಳಿ ಕಡೆಕಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ.
ನಿಟ್ಟೂರಿನಲ್ಲಿರುವ ಕಿದಿಯೂರು ಲಾರ್ಡ್ಸ್ ಇಂಟರ್ನ್ಯಾಷನಲ್ ಶಾಲೆಗೆ ಆಗಮಿಸಿದ ಪುತ್ತಿಗೆ ಶ್ರೀಪಾದರನ್ನು ಭವ್ಯವಾಗಿ ಸ್ವಾಗತಿಸಲಾಯಿತು.
ಜಿ ರಾಮ್ ಜಿ ಕುರಿತ ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಸಂವಿಧಾನದ ವಿಧಿ 168ರನ್ವಯ ತಮ್ಮ ಸಂವಿಧಾನಬದ್ಧ ಕರ್ತವ್ಯವನ್ನು ನಿರ್ವಹಿಸಿದ್ದಾರೆ.
ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗೋಲ್ಡ್ ಕೋಸ್ಟ್ ಎಂಟರ್ಟೈನ್ಮೆಂಟ್ ವತಿಯಿಂದ ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮವನ್ನು ಇದೇ ಜ.25ರಂದು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸುದೀಪ್ ಶೆಟ್ಟಿ ತಿಳಿಸಿದರು.
ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ‘ಫಲಪುಷ್ಪ ಪ್ರದರ್ಶನ-2026’ ಅನ್ನು ಇದೇ ಜ.26ರಿಂದ 28ರವರೆಗೆ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಬೈಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚ್ ನ ಸಭಾಪಾಲಕರಾದ ಪಾಸ್ಟರ್ ಕುಮಾರ್ ಸಾಲಿನ್ಸ್ ಹೇಳಿದರು.
ಕಲ್ಯಾಣಪುರ ಬಳಿಯ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಡೆದಿದೆ.
ನಮ್ಮ ಯುಪಿಎ ಸರಕಾರ 2005ರಲ್ಲಿ ಜಾರಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸುವ ಹಾಗೂ ಯೋಜನೆಯಿಂದ ಮಹಾತ್ಮಗಾಂಧಿ ಹೆಸರನ್ನು ತೆಗೆಯುವ ಸಂಚನ್ನು ಕೇಂದ್ರ ಸರಕಾರ ರೂಪಿಸುತಿದ್ದು, ದೇಶದ ಬಡ ಕಾರ್ಮಿಕರ ಹೊಟ್ಟೆಗೆ ಹೊಡೆಯುತ್ತಿದೆ.
ತನ್ನ ಇಷ್ಟದ ಬಂಗುಡೆ ಮೀನು ಹಿಡಿದು ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಕುಣಿದು ಕುಪ್ಪಳಿಸಿದರು.
ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ ಪ್ರಶಸ್ತಿ ಗೆದ್ದು ಹುಟ್ಟೂರಿಗೆ ಆಗಮಿಸಿದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ ಕೋರಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ರಕ್ಷಿತಾಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ; ಸಾವಿರಾರು ಭಕ್ತರು ಭಾಗಿ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸರ್ಕಾರದಿಂದ ತಡೆ ಬಿದ್ದಿದೆ. ಇದರ ವಿರುದ್ಧ ರೈತ ಸಂಘ, ಬಿಜೆಪಿ ಮತ್ತು 8 ಗ್ರಾಮದ ಗ್ರಾಮಸ್ಥರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ದೇಶದ ಆರ್ಥಿಕ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರದಿಂದ ಪ್ರಗತಿ ಪಥದತ್ತ ಕೊಂಡೊಯ್ಯಲು ಸಾಧ್ಯವಿದೆ.
ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ.
ಉಡುಪಿ ಪರ್ಯಾಯೋತ್ಸವದ ವೈಭವಮಯ ಸಂಭ್ರಮದ ನಡುವೆ, ಮಿಸ್, ಟೀನ್ & ಮಿಸೆಸ್ ಮಣಿಪಾಲ್ 2025–26 ರ ಮೂರನೇ ಆವೃತ್ತಿಯ ಅಧಿಕೃತ ಪೋಸ್ಟರ್ ಅನ್ನು ಉಡುಪಿ ರಿಲಯನ್ಸ್ ಸ್ಮಾರ್ಟ್ ಬಜಾರ್ನಲ್ಲಿ ಭವ್ಯವಾಗಿ ಬಿಡುಗಡೆ ಮಾಡಲಾಯಿತು.
ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ನಿನ್ನೆಯಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ.