Showing 20 of 3085 posts • Page 42 of 155
ಶೀರೂರು ಪರ್ಯಾಯದ ಪ್ರಯುಕ್ತ ನಗರಸಭೆಯ ವತಿಯಿಂದ 50ಲಕ್ಷ ವೆಚ್ಚದಲ್ಲಿ ನಗರದಾದ್ಯಂತ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಗುರುವಾರ ಸಂಜೆ ಉದ್ಘಾಟಿಸಿದರು.
ಫೇಸ್ ಬುಕ್, ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.
ಶ್ರೀಕೃಷ್ಣ ಮಠದಲ್ಲಿ ಅದ್ಧೂರಿ ಚೂರ್ಣೋತ್ಸವ (ಹಗಲು ತೇರು) ಗುರುವಾರ ನೆರವೇರುವುದರೊಂದಿಗೆ ವಾರ್ಷಿಕ ಸಪ್ತೋತ್ಸವ ಸಂಪನ್ನಗೊಂಡಿತು.
: ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಪರ್ಯಾಯೋತ್ಸವದ ಪ್ರಯುಕ್ತ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಗರದಾದ್ಯಂತ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ಇಂದು (ಜ.15) ಸಂಜೆ 7 ಗಂಟೆಗೆ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ಸಮೀಪದ ವೃತ್ತದಲ್ಲಿ ಇದರ ಉದ್ಘಾಟನೆ ನಡೆಯಲಿದೆ.
ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿ ಪ್ರಯುಕ್ತ ಬುಧವಾರ ಸಂಜೆ ಸಂಭ್ರಮದ ಬ್ರಹ್ಮರಥ ಸಹಿತ ಮೂರುತೇರು ಉತ್ಸವ ನಡೆಯಿತು.
ಉಡುಪಿಯ ಮಲ್ಪೆ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಮಲ್ಪೆ ಮಾಲ್ತಿದ್ವೀಪದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ನಡೆಯುತ್ತದೆ.
ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರಿ ಸ್ಥಳದಲ್ಲಿ ನಿರ್ಮಿಸಲಾದ ಮನೆ ಮತ್ತು ಶೆಡ್ ಗಳನ್ನು ತೆರವುಗೊಳಿಸಿದನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಂದ ತಾಳಮದ್ದಳೆ ಕಲಾವಿದರ ಅವಹೇಳನ ಮಾಡಿದರು. ಪತ್ರಿಕೆಯ ಅಂಕಣದಲ್ಲಿ ಕಲಾವಿದರ ತೇಜೋವಧೆ ನಿಲ್ಲಿಸುವಂತೆ ಒತ್ತಾಯ ಹೇರಲಾಗಿದೆ.
ಉಡುಪಿಯ ಮರ್ಣೆ ಕಲಾವಿದರ ಊರು ಅಂತಲೇ ಪ್ರಸಿದ್ಧಿ. ಇಲ್ಲಿನ ಪ್ರಸಿದ್ಧ ಕಲಾವಿದ ಮಹೇಶ್ ಮರ್ಣೆ ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು.
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ “ಜಲಜೀವನ್ ಮಿಷನ್” ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಜನರ ಬಹುದಿನಗಳ ಕನಸೊಂದು ಈಡೇರಿದಂತಾಗಿದೆ.
ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಎಲ್ಲ ಸಹಕಾರಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು.
ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವದ ಅಂಗವಾಗಿ ಪಲ್ಲಕ್ಕಿ ಉತ್ಸವ, ಶ್ರೀ ಕೃಷ್ಣ ಮಠದ ಗರ್ಭ ಗುಡಿಯ ಆವರಣದಲ್ಲಿ ಪಾರ್ಥ ಸಾರಥಿ ಸುವರ್ಣ ರಥದ ಪ್ರಥಮ ರಥೋತ್ಸವಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಚಾಲನೆಯನ್ನು ನೀಡಿದರು.
ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವವು ಆರಂಭಗೊಂಡಿತು.
ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಜ್ಞಾನ ಕಾರ್ಯದ ಅಂಗವಾಗಿ ಸುಧಾ ಗೀತಾದಿ ಪಾಠ ಪಂಚಕ ಹಾಗೂ ಮಂಗಲ ಮಹೋತ್ಸವ, ಗುರುವಂದನೆ ಕಾರ್ಯಕ್ರಮ ರಾಜಾಂಗಣದಲ್ಲಿ ಶುಕ್ರವಾರ ನಡೆಯಿತು.
ಯುಎಇಯ ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್, ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ, ಖ್ಯಾತ ಬಹುಭಾಷಾ ಚಲನಚಿತ್ರ ನಟಿ ವಿನಯ ಪ್ರಸಾದ್ ಸೇರಿದಂತೆ ಒಟ್ಟು ಐದು ಮಂದಿ ಗಣ್ಯ ಸಾಧಕರನ್ನು 2026ನೇ ಸಾಲಿನ ಹೊಸ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದದ ಕುರಿತು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಗೆ ಜಾಹೀರಾತು ನೀಡಿರುವುದು ತಪ್ಪು. ಸರಕಾರದ ಹಣ ಉಪಯೋಗಿಸುವುದು ಅಕ್ಷೇಪಾರ್ಹ ಎಂದರು.