Showing 20 of 3348 posts • Page 43 of 168
ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
ಯುದ್ಧ ಸನ್ನಿವೇಶದ ಹಿನ್ನೆಲೆ ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಹೆಸರು ಮಾಡಿದ, ಇದೀಗ ತಮ್ಮ ನಾಯಕತ್ವದಲ್ಲಿ ಚೊಚ್ಚಲ ವಿಶ್ವಕಪ್ ಸಾಧನೆ ಮಾಡಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯೊಂದಿಗೆ ವಿಶೇಷ ನಂಟಿದೆ. ಅವರ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಹಾಗಾಗಿ ಸೂರ್ಯಕುಮಾರ್ ಯಾದವ್ ಉಡುಪಿಯ ಅಳಿಯ.
ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಸ್ಕೂಟಿ ಸವಾರನಿಗೆ ಹಲ್ಲೆ ನಡೆಸಿದ್ದಲ್ಲದೆ, ಸವಾರನ ಪತ್ನಿಯ ಮೇಲೂ ಹಲ್ಲೆ ನಡೆಸಿದ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ.
ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು 30 ವರ್ಷಗಳಿಂದ ಮನೆಯಲ್ಲಿ ಜೀತಕ್ಕೆ ಇಟ್ಟು ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ ನಿರಂತರ ಕಡೆಗಣನೆ ಮುಂದುವರಿದಿದೆ. ಇದರ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಉಡುಪಿ ಹಳೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿ ಮಾರ್ಚ್ 14 ರಂದು ಸಂಜೆ 4.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹೇಳಿದರು.
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಹಾಗೂ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇದೇ ಮಾ.31ರಿಂದ ಎಪ್ರಿಲ್ 3ರವರೆಗೆ ಶ್ರೀಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.
ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಇವತ್ತು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಸಾಗಿದ ಕಾರ್ಯಕರ್ತರು ಅಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.
ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.
ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.
ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್(55)ಅಲ್ಪ ಕಾಲದ ಅನಾರೋಗ್ಯದಿಂದ ಮಾ.7 ರಂದು ರಾತ್ರಿ ನಿಧನ ಹೊಂದಿದರು.
ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳದ ಶಂಕುಸ್ಥಾಪನೆ ನಡೆದಿತ್ತು. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು.ಇದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತದೆ.