Showing 20 of 3348 posts • Page 44 of 168
ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಯ ಎಲ್ಲಾ ಯೋಜನೆಗೆ ಅನುದಾನ ನೀಡಿದ್ದು ಯುವನಿಧಿಗೆ ಮಾತ್ರ ಒಂದು ಪೈಸೆಯು ನೀಡಿಲ್ಲ.
ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್: ಮಾ.17ಕ್ಕೆ ಉಡುಪಿಯಲ್ಲಿ “ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳ”
ಮಲ್ಪೆ ಬಂದರಿನ ದಕ್ಕೆಯ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಡಿಜಿಟಲ್ ಪಾಲಿಸಿ ರೂಪಿಸಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ ಎಂದು ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು.
ಕಾರ್ಕಳ ತಾಲೂಕಿನ ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ “ಕೋಟಿಚೆನ್ನಯ ಜೋಡುಕರೆ ಕಂಬಳ”ದ ನೂತನ ಕಂಬಳ ಕರೆ ನಿರ್ಮಾಣದ ಭೂಮಿಪೂಜೆ ಗುರುವಾರ ಸಾಣೂರು ಸೇಣರಬೆಟ್ಟು ಎಂಬಲ್ಲಿ ನಡೆಯಿತು.
ವಾರಾಹಿ ನದಿಯನ್ನು ಅವಲಂಬಿಸಿರುವ ರೈತರ ಹಕ್ಕುಗಳಿಗೆ ಆದ್ಯತೆ ನೀಡಬೇಕು. ವಾರಾಹಿ ಮೂಲ ಯೋಜನೆಯಂತೆ ನೀರಿನ ಹಂಚಿಕೆಯನ್ನು ಖಚಿತಪಡಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ಒಟ್ಟು ಏಳು ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಂಡ್ಲೂರಿನಿಂದ ಸಿದ್ಧಾಪುರದವರೆಗೆ ಎರಡು ದಿನಗಳ ಕಾಲ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ನಡೆಯಿತು.
ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.
ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು
ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಇಂದು ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಬ್ರಹ್ಮಾವರ ತಾಲೂಕು ಸಂಘದ ಉಪಾಧ್ಯಕ್ಷ ಮತ್ತು ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ವರದಿಗಾರ ಶೇಷಗಿರಿ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ ಹಿರಿಯ ರಂಗಕರ್ಮಿ, ನಾಟಕಕಾರ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುಡುಗಿದ್ದಾರೆ.
ಬಳ್ಳಾರಿಯಿಂದ ಕಬ್ಬಿಣದ ಪೈಪುಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಮಾಳ ಘಾಟಿಯಲ್ಲಿ ಅಡ್ಡ ಬಿದ್ದು ಅಪಘಾತ ಸಂಭವಿಸಿದೆ.
80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು ನಡೆದಿದೆ.
ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರದು ಎಷ್ಟು ದಾಖಲೆಯ ಬಜೆಟ್ ದಾಖಲೆಗೆ ಯಾರು ಅಡ್ಡಿ ಮಾಡುತ್ತಾರೆ ಕಾಂಗ್ರೆಸ್ ತೀರ್ಮಾನ ಮಾಡಬೇಕು. ಕುರ್ಚಿಯ ಕಾದಾಟಕ್ಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದರು.