Showing 20 of 3078 posts • Page 45 of 154
ಉಡುಪಿ: ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು ಮೆಸೇಜ್ ಮಾಡಿದ್ದಾರೆ. ವಾಟ್ಸಾಪ್ […]
ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೋವೊಂದು ಮನೆಗೆ ಡಿಕ್ಕಿ ಹೊಡೆದ ಘಟನೆ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ರಾ.ಹೆ. 66ರಲ್ಲಿ ಸಂಭವಿಸಿದೆ.
ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಸಹಯೋಗದಲ್ಲಿ ಜ. 3ರಂದು ಸಂಜೆ 5.30ಕ್ಕೆ ಉಡುಪಿಯ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಸಭಾಂಗಣದಲ್ಲಿ “ರಿವಾರ್ಡ್ ಟು ಅವಾರ್ಡ್” ದೃಶಾ ಕೊಡಗು ಅಭಿನಂದನಾ ಕಾರ್ಯಕ್ರಮ
ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗ ನೇರನೇಮಕಾತಿಗೆ ಒತ್ತಾಯಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ಇದರ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು 15 ದಿನಕ್ಕೆ ಕಾಲಿಟ್ಟಿದೆ.
ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಮೇಲೆ ಲಾರಿ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಉಡುಪಿ: ಓದುವಂತೆ ಬುದ್ಧಿ ಹೇಳಿದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಡಿ.26ರಂದು ಸಂಜೆ ವೇಳೆ ಸಮನ್ವಿಗೆ ತಾಯಿ ಮುಂಬರುವ ಪರೀಕ್ಷೆಗೆ ಓದುವಂತೆ ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ತಾಯಿ […]
ಕುಂದಾಪುರ ವೆಂಕಟರಮಣ ದೇವಸ್ಥಾನದ ಎದುರಿನ ರಥಬೀದಿಯಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ
ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.
ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಪ್ರಾಯದ ಮಕ್ಕಳು ಹಾಗೂ ವಯಸ್ಕರು ಒಟ್ಟು ಸೇರಿ ನಲವತ್ತರಷ್ಟಿದ್ದ ಹೊರರಾಜ್ಯದ ಭೀಕ್ಷುಕರನ್ನು ಮನವೊಲಿಸಿ ಊರಿಗೆ ರವಾನಿಸುವ ಕಾರ್ಯಚರಣೆ ಉಡುಪಿಯಲ್ಲಿ ಮಕ್ಕಳ ರಕ್ಷಣಾ ಘಟಕ ಹಾಗೂ ಸಮಾಜ ಸೇವಕ ಒಳಕಾಡು ಇವರ ನೇತೃತ್ವದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ.
ರಂಗಭೂಮಿ ಉಡುಪಿ ಇದರ ವತಿಯಿಂದ “ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ” ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ
ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ.
ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ.
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶ್ರಮ ಸ್ವೀಕಾರ, ಪೀಠಾರೋಹಣದ ಸುವರ್ಣ ಮಹೋತ್ಸವದ ನೆನಪಿಗಾಗಿ ಅನ್ನಬ್ರಹ್ಮ, ಉತ್ಸವ ಬ್ರಹ್ಮನಾದ ಉಡುಪಿ ಶ್ರೀಕೃಷ್ಣನಿಗೆ ‘ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ’ ಕಾರ್ಯಕ್ರಮ ಇದೇ ಡಿ.27ರಂದು ನಡೆಯಲಿದೆ.