Showing 20 of 3348 posts • Page 47 of 168
ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಲ್ಪೆ ಬಂದರು ಸಮೀಪ ಖಾರದ ಪುಡಿ ಎರಚಿ ಮೀನು ವ್ಯಾಪಾರಿಗೆ ಹಲ್ಲೆ ಮಾಡಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ, ಬಜಗೋಳಿ ಪರಿಸರದಲ್ಲಿ ಶನಿವಾರ ಸಂಜೆ ಅಕಾಲಿಕ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಚಿತ ಸಿಟಿ ಸ್ಕ್ಯಾನ್ ಸೇವೆ ಬಂದ್ ಬಡರೋಗಿಗಳ ಸಂಕಷ್ಟ ಎದುರಾಗಿದ್ದು, ಉಡುಪಿ ಜಿಲ್ಲಾಸ್ಪತ್ರೆಯಲ್ಲೂ ಸಿಟಿ ಉಚಿತ ಸ್ಕ್ಯಾನಿಂಗ್ ಸೇವೆ ಬಂದ್ ಮಾಡಲಾಗಿದೆ.
ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯುವಕರ ತಂಡವೊಂದು ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಶಂಕರಪುರದಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25ರಂದು ಜಿಲ್ಲೆಗೆ ಆಗಮಿಸಿ, ಕಾರ್ಕಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿರುವ 14ನೇ ವರ್ಷದ ನಾಟಕೋತ್ಸವ ‘ರಂಗಹಬ್ಬ–14’ ಫೆಬ್ರವರಿ 22ರಿಂದ 28ರವರೆಗೆ ಉಡುಪಿಯ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ 300ನೇ ರಕ್ತದಾನ ಶಿಬಿರ “ಹೆಗ್ಗುರುತು- 300” ಅನ್ನು ಇದೇ ಫೆ. 22ರಂದು ಬೆಳಿಗ್ಗೆ 8.30ರಿಂದ 1ಗಂಟೆಯವರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದರು.
ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಟಯರ್ ಸ್ಫೋಟಗೊಂಡು ಲಾರಿಯೊಂದು ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ.
ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.
ಶ್ರೀ ಕೃಷ್ಣಮಠ ಪರಿಸರದ ರಥಬೀದಿಯಲ್ಲಿರುವ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನಗೊಂಡಿತು.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಗಣಹೋಮ, ನವಕ ಪ್ರಧಾನ ಹೋಮ, ಮಹಾಪೂಜೆ ನೆರವೇರಿತು. ಮಧ್ಯಾಹ್ನ ರಥೋತ್ಸವ ನಡೆದ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.
ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.
ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಇದರಿಂದ ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದ ಒಳಾಂಗಣದಲ್ಲಿ ಹಾವೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಯಾಯಿತು. ತಕ್ಷಣ ಬಾಲಮಂದಿರದ ಮೇಲ್ವಿಚಾರಕರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು.
ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ‘ಆಶ್ಲೇಷ ಆನ್ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.