Showing 20 of 3348 posts • Page 49 of 168
ಬಸ್ ಏಜೆಂಟೊಬ್ಬರು ಮನೆಯ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.
ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಡಗುಡ್ಡೆಅಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಜಾರು ಬಂಡಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಂಡ್ಲೂರು ಸೇತುವೆ ಬಳಿ ವಾರಾಹಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿಯ ಹಲವಾರು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಹಕ್ಕಿನಜಾಥಾ ನಡೆಯಿತು. ಫೆಬ್ರವರಿ 2 ರಿಂದ 17 ರವರೆಗೆ ಕರ್ನಾಟಕದಾದ್ಯಂತ ಎಲ್ಲಾ 31 ಜಿಲ್ಲೆಗಳಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ.
ರೈತರು ಕಾರ್ಪೊರೇಟ್ ಸ್ಟ್ಯಾಂಡರ್ಡ್ ನಲ್ಲಿ ಬದುಕು ಮಾಡಬೇಕು. ರೈತರ ತ್ಯಾಗವನ್ನು ಗುರುತಿಸುವ ಉದ್ದೇಶದಿಂದ ರೈತಪೀಠ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ನಾಗಮಂಡಲದ ಮೂಲಕ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾ ವಿಲಾಯತ್ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಅಬಕಾರಿ ಹಗರಣ ರಾಜ್ಯದಾದ್ಯಂತ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಭೇಟಿ ಕೊಟ್ಟಿರುವುದು ಬಹಳಷ್ಟು ಗಮನಸೆಳೆದಿದೆ.
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದರು.
ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು.
ಮಲ್ಪೆ ಸಮೀಪದ ತೊಟ್ಟಂ ನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ (ಕಿರು ದೇವಾಲಯ)ನ ಉದ್ಘಾಟನೆ ಕಾರ್ಯಕ್ರಮ ಫೆಬ್ರವರಿ 11ರ ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೆಬೆಟ್ಟು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಆತ್ರಾಡಿ ಸಮೀಪದ ಕಬ್ಯಾಡಿ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ತಡರಾತ್ರಿ ನಡೆದಿದೆ. ಕಬ್ಯಾಡಿಯ ಬಾಲಕೃಷ್ಣ ನಾಯಕ್ ಎಂಬವರ ಕಾಂಪೌಂಡ್ ನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ.
ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಹೊರಡಿಸುತ್ತಾ ಶಬ್ದ ಮಾಲಿನ್ಯ ಉಂಟು ಮಾಡುವ ದ್ವಿಚಕ್ರ ಸವಾರರ ವಿರುದ್ಧ ಮಣಿಪಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.