Showing 20 of 3073 posts • Page 5 of 154
ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯ ನಿರ್ಲಕ್ಷ್ಯ ಈಗ ರೈತರ ಬದುಕಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ.
ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಣಿಪಾಲ ಮತ್ತು ಕೊಳಲಗಿರಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಪರಾರಿ ಶೀಂಬ್ರಾ ಸೇತುವೆಯು ಪುಂಡು ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೀವವನ್ನು ಪಣಕ್ಕಿಟ್ಟು ದುಡಿಯುವ ಮೀನುಗಾರರ ಬದುಕು ಮಾತ್ರ ಇಂದಿಗೂ ಅತಂತ್ರ!
ಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಮಂಚಿ ಕುಮೇರಿಯ ವಾಗ್ಲೆ ಸ್ಟೋರ್ಗೆ ಸಂಪರ್ಕಿಸುವ ರಸ್ತೆಯಲ್ಲಿ ವಿದ್ಯುತ್ ತಂತಿಗಳು ಜೋತುಬಿದ್ದಿರುವುದರಿಂದ ಸಾರ್ವಜನಿಕರು ಆತಂಕದ ನಡುವೆ ಸಂಚರಿಸುವಂತಾಗಿದೆ.
ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಹೆದ್ದಾರಿ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಸಂಗೀತ ವ್ಯವಸ್ಥೆ ಅಳವಡಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಹೆಬ್ರಿ ತಾಲೂಕಿನ ತಾಲೂಕು ಪಂಚಾಯತ್ ಅಧೀನದಲ್ಲಿರುವ ಹೆಬ್ರಿಯ ಎಂಆರ್ಎಫ್ (ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಕುಚ್ಚೂರು ಆಗ್ರಹಿಸಿದರು.
ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ. ಕೃಷ್ಣ ಕುಲಾಲ್ ತಿಳಿಸಿದ್ದಾರೆ.
ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯಂದು ನಡೆದ ಕಾರ್ಯಕ್ರಮವೊಂದರಲ್ಲಿ ಜಗದ್ಗುರು ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ರಾಮಮಂದಿರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಹಗರಣಗಳ ಆರೋಪಗಳ ಬಗ್ಗೆ ಪೇಜಾವರ ಶ್ರೀಗಳು ಮೌನ ವಹಿಸಿರುವುದು ಏಕೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದರು.
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು.
ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು.
ಜಿಲ್ಲಾಸ್ಪತ್ರೆ ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭಾನುವಾರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಯು.ಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.