Showing 20 of 3348 posts • Page 50 of 168
ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದ ಸೀತಾನದಿಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಿ ಕೃಷಿಭೂಮಿ ಉಳಿಸುವಂತೆ ಆಗ್ರಹಿಸಿ ನಾಗರಮಠ ಗ್ರಾಮಸ್ಥರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು.
ಜಿಎಸ್ಬಿ ಸಮಾಜ ಹಿತರಕ್ಷಣಾ ವೇದಿಕೆಯ ಮಹತ್ವಾಕಾಂಕ್ಷಿ ಯೋಜನೆ ವಯೋವಂದನ ಆತಿಥ್ಯ ಗೃಹ ಇದರ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಕಾಶೀ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ನಕ್ಷತ್ರ (ಸ್ವಾತಿ ನಕ್ಷತ್ರ)ದಂದು ಫೆಬ್ರವರಿ 8 ಆದಿತ್ಯವಾರದಂದು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಜರುಗಲಿರುವುದು.
ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಜಿಲ್ಲೆಯಲ್ಲಿ ಅಪಘಾತ ಹೆಚ್ಚು ಸಂಭವಿಸುತ್ತಿರುವ ಬ್ಲ್ಯಾಕ್ ಸ್ಪಾಟ್ ಎಂದು ಗುರುತಿಸಿರುವ 6 ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಮಂಚಿಕೆರೆ ಶ್ರೀ ವಾಸುಕಿ ನಾಗಯಕ್ಷಿ ಸನ್ನಿಧಾನದ 21ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಶುಕ್ರವಾರ ಸಂಪನ್ನಗೊಂಡಿತು
ಕರಾವಳಿಯ ಜನಪದ ಕ್ರೀಡೆ ಕಂಬಳ. ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪಾರಂಪರಿಕ ಕಂಬಳಗಳು ಭಕ್ತಿ ಭಾವದಿಂದ ನಡೆಯುತ್ತಿವೆ. ಉಡುಪಿಯ ಕಟಪಾಡಿಯಲ್ಲಿ ರಾಜ ಮನೆತನದ ಸಂಪ್ರದಾಯಿಕ ಕಂಬಳ ನಡೆಯಿತು. ಇಂತಹ ನೂರಾರು ದೈವಕಂಬಳ ಉಡುಪಿ ಜಿಲ್ಲೆಯಲ್ಲಿ ಭಯ ಭಕ್ತಿಯಿಂದ ನಡೆಯುತ್ತದೆ.
ಉಡುಪಿ: ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧಿಸಿ ಉಪ್ಪೂರು ಗ್ರಾಮಸ್ಥರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾಡಳಿತವು ಉಪ್ಪೂರಿನಲ್ಲಿ 9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ತಯಾರಿ ನಡೆಸಿದೆ. ಶೆಲ್ಟರ್ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೀದಿ ಬಾಯಿಗಳ ಕಾಟದಿಂದ ರೋಸಿ ಹೋಗಿದ್ದ ಜನರಿಗೆ ನೆಮ್ಮದಿ ಕಲ್ಪಿಸುವ ನಿಟ್ಟಿನಲ್ಲಿ […]
ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಮ್ಯಾರಥಾನ್’ನ ಎಂಟನೇ ಆವೃತ್ತಿ ಇದೇ ಫೆ.8ರಂದು ಮಣಿಪಾಲ ಕೆಎಂಸಿ ಗ್ರೀನ್ಸ್ನಲ್ಲಿ ನಡೆಯಲಿದ್ದು, ಈ ಬಾರಿ ದಾಖಲೆಯ 22,000ಕ್ಕೂ ಅಧಿಕ ಓಟಗಾರರು ವಿದೇಶಗಳಿಂದ ಹಾಗೂ ದೇಶಾದ್ಯಂತದಿಂದ ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ತಿಳಿಸಿದ್ದಾರೆ.
ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿಯ ಉದ್ಯಾವರದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರ್ಹಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದಿರುವುದಾಗಿ ವರದಿಯಾಗಿದೆ.
ತುಳುನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಗುರುತಿಸಿದ ಕಂಬಳ ಕೂಟಕ್ಕೂ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಬಳ ಸಂಘಟಕರಿಗೆ ಚಿನ್ನದ ಬೆಲೆ ಏರಿಕೆ ಹೊರೆಯಾಗುತ್ತಿದೆ. ಪ್ರತಿ ಕಂಬಳ ಕೂಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬಹುಮಾನ ನೀಡಲಾಗುತ್ತದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದರಿಂದ ಕರಾವಳಿಯ ಕಂಬಳ ಕೂಟದಲ್ಲಿ ಇನ್ನೂ ಚಿನ್ನ ನೀಡುತ್ತಾರಾ..? ಇಲ್ಲವಾ..? ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕಂಬಳ ಸಮಿತಿಯ ರಾಜ್ಯಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ಪಷ್ಟಣೆ ನೀಡಿದ್ದಾರೆ.
ನಡುರಸ್ತೆಯಲ್ಲಿ ಕುಣಿದು, ಪಟಾಕಿ ಸಿಡಿಸಿ ನಡುರಸ್ತೆಯಲ್ಲಿಯೇ ಹುಚ್ಚಾಟ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.
ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ.
ಹಿರಿಯಡಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಾಲಯದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.