Showing 20 of 3085 posts • Page 51 of 155
ಕೃಷ್ಣನೂರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.
ಕೃಷ್ಣನೂರು ಉಡುಪಿಗೆ ಪ್ರಧಾನಿ ಮೋದಿ ಬಂದಿಳಿದಿದ್ದಾರೆ. ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಪ್ರಧಾನಿಗೆ ಭವ್ಯ ಸ್ವಾಗತ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ ಉಡುಪಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗಿಲ್ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಆರಂಭವಾಗಿದೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಭಕ್ತರು ಪಠಿಸಲಿದ್ದಾರೆ. ಮಧ್ಯಾಹ್ನ 12 .15ರ ಸುಮಾರಿಗೆ ನರೇಂದ್ರ ಮೋದಿ ಸಭಾಂಗಣಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠ ಭೇಟಿ ಹಿನ್ನೆಲೆ ಭದ್ರತಾ ವ್ಯವಸ್ಥೆಗೆ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ ಕಡಲ ತೀರದಲ್ಲಿ ಕಲಾವಿದರ ಕೈಚಳಕ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ನಡೆಯುತ್ತಿದ್ದು, ಉಡುಪಿಯಲ್ಲಿ ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ ಶುರುವಾಗಿದೆ. ಪ್ರಧಾನಿ ಮೋದಿಯ ಭದ್ರತಾ ಪಡೆ ಮತ್ತು ರಾಜ್ಯ ಪೊಲೀಸರು ಮಾಕ್ ಡ್ರಿಲ್ ಮಾಡಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ
ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ, ನ.28 ರಂದು ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆ
ಶುಕ್ರವಾರ (ನ.28) ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಬರುವವರು ಬೆಳಿಗ್ಗೆ 10.30ರೊಳಗೆ ಆಗಮಿಸಿ ನಿಗದಿತ ಸ್ಥಳ ಸೇರುಬೇಕು.
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯ ಹೆಚ್ಚಳದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಪರಿಣಾಮಗಳನ್ನು ಮನಗಂಡು, ಸಾಲಿಗ್ರಾಮ ಮೂಲದ ಸಮಾಜ ಸೇವಕರೋರ್ವರು ಪ್ಲಾಸ್ಟಿಕ್ ಮುಕ್ತ ವಿವಾಹ ಮಹೋತ್ಸವ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿಗೆ ಆಗಮಿಸಲಿದ್ದಾರೆ. ಪ್ರಧಾನಿ ಕೃಷ್ಣಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಭಾರತ ದೇಶದಲ್ಲಿ ಗೋ ಮಾಂಸ ರಫ್ತು ಹಾಗೂ ಜಾನುವಾರು ಹತ್ಯೆಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿಷೇಧ ಮಾಡಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಕಠಿಣ ಕಾನೂನು ಜಾರಿಗೊಳಿಸಬೇಕು
ಜಿಲ್ಲೆಯಾದ್ಯಂತ ಬುಧವಾರ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧೆ ಭಕ್ತಿಯಿಂದ ನೆರವೇರಿತು. ಷಷ್ಠಿ ಅಂಗವಾಗಿ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.
ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್ಶೋ ನಡೆಯಲಿದ್ದು
ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಬಂಗಾರದ ಕವಚವನ್ನು ಸೇವಾ ರೂಪದಲ್ಲಿ ನೀಡುತ್ತಿದ್ದಾರೆ.