Showing 20 of 3348 posts • Page 59 of 168
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.
ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಪ್ರಾಯದ ಮಕ್ಕಳು ಹಾಗೂ ವಯಸ್ಕರು ಒಟ್ಟು ಸೇರಿ ನಲವತ್ತರಷ್ಟಿದ್ದ ಹೊರರಾಜ್ಯದ ಭೀಕ್ಷುಕರನ್ನು ಮನವೊಲಿಸಿ ಊರಿಗೆ ರವಾನಿಸುವ ಕಾರ್ಯಚರಣೆ ಉಡುಪಿಯಲ್ಲಿ ಮಕ್ಕಳ ರಕ್ಷಣಾ ಘಟಕ ಹಾಗೂ ಸಮಾಜ ಸೇವಕ ಒಳಕಾಡು ಇವರ ನೇತೃತ್ವದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ.
ರಂಗಭೂಮಿ ಉಡುಪಿ ಇದರ ವತಿಯಿಂದ “ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ” ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ
ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ.
ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ.
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶ್ರಮ ಸ್ವೀಕಾರ, ಪೀಠಾರೋಹಣದ ಸುವರ್ಣ ಮಹೋತ್ಸವದ ನೆನಪಿಗಾಗಿ ಅನ್ನಬ್ರಹ್ಮ, ಉತ್ಸವ ಬ್ರಹ್ಮನಾದ ಉಡುಪಿ ಶ್ರೀಕೃಷ್ಣನಿಗೆ ‘ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ’ ಕಾರ್ಯಕ್ರಮ ಇದೇ ಡಿ.27ರಂದು ನಡೆಯಲಿದೆ.
ರಾಯಚೂರು ಜಿಲ್ಲೆಯ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿ
ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾನೂನು ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ದೂರಿದರು.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಕಡಲ ತೀರದಲ್ಲಿ “ಕಾಪು ಕಡಲ ಪರ್ಬ”ವನ್ನು ಆಯೋಜಿಸಲಾಗಿದೆ.
ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಅಗಲಿ ಆರು ವರ್ಷಗಳು ಕಳೆದಿವೆ. ಮಂಗಳವಾರ ಅವರ ಆರಾಧನಾ ಮಹೋತ್ಸವ ನಡೆಯಿತು.
ಈ ದೇಶದ ಎಲ್ಲ ಜ್ವಲಂತ ಸಮಸ್ಯೆಗಳ ಹೋರಾಟಗಳಲ್ಲಿ ಬಹಳ ಸ್ಪೂರ್ತಿಯ ನೆಲೆಯಾಗಿ ಬಹಳ ನೇರವಾಗಿ ಇದ್ದವರು ಶಿವರಾಮ ಕಾರಂತರು. ಅವರು 10 ವಿಶ್ವವಿದ್ಯಾನಿಲಯ
ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಅಪಾಯಕಾರಿ ರೀತಿಯಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಹಿರಿಯಡಕ ಗುಡ್ಡೆಅಂಗಡಿ ಬಳಿ ಸಂಭವಿಸಿದೆ.
ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಂಗಳೂರಿನ ಸಹಸ್ರ ಕಂಠ ಗಾಯನ ಸೇವಾ ಸಮಿತಿ ವತಿಯಿಂದ ದಾಸ ನಮನ ಕಾರ್ಯಕ್ರಮವು ನಡೆಯಿತು.