Showing 20 of 3348 posts • Page 6 of 168
ಅಪಘಾತಕ್ಕೀಡಾದ ವಾಹನವನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಸರಕು ಸಾಗಣೆ ಲಾರಿಯೊಂದು ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಮಣಿಪಾಲದ ಜಿಲ್ಲಾಧಿಕಾರಿಗಳ ಅಟಲ್ ಬಿಹಾರಿ ಹಾಲಲ್ಲಿ ಜನಸಾಮಾನ್ಯರಿಗೆ ಆಗುವ ಕಷ್ಟಗಳನ್ನು ಮಾನ್ಯ ಜಿಲ್ಲಾ ಉಸ್ತುವಾರಿಗಳಾದ ಸಚಿವ ಶ್ರೀ ರಿಜ್ವಾನ್ ಅಹ್ಮದ್ ಅವರ ಅಹವಾಲಿಗೆ ಉಡುಪಿ ಯುವ ಉದ್ಯಮಿ ಹಾಗೂ ಫೆಡರೇಷನ್ ಆಫ್ ಕರ್ನಾಟಕ ಮತ್ತು ಬಾಂಬೆ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಸದಸ್ಯ ಆಗಿರುವ ಶ್ರೀ ಸುಶಾಂತ್ ಬ್ರಹ್ಮವರ ನೇರವಾಗಿ ಉಡುಪಿ ಎಪಿಎಂಸಿ ಉಪ ಗುತ್ತಿಗೆ ಒಪ್ಪಂದ ನಿಲ್ಲಿಸಿ ಬಿಡ್ಡರ್ಸ್ ಅವ್ರಿಗೆ ನೇರ ಅಂಗಡಿ ಸಿಗ್ಬೇಕು ನೆರವಾಗಿ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
‘ವಿಕಸಿತ ಭಾರತ–2047’ ಅಭಿಯಾನದಲ್ಲಿ ಯುವಜನರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ‘ವಿಕಸಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ (VBYLD)–2027’ ಕಾರ್ಯಕ್ರಮವನ್ನು ಆಯೋಜಿಸಿದೆ.
ನಿತ್ಯ ನಾಲ್ಕು ಗೋಡೆಗಳ ನಡುವೆ ಕುಳಿತು ಪಾಠ ಕೇಳುವ ವಿದ್ಯಾರ್ಥಿಗಳು, ತರಗತಿಯಾಚೆಗೆ ಬದುಕಿನ ಪಾಠ ಕಲಿಯುವ ಅವಕಾಶ ಪಡೆದರು. ಟೆಂಟ್ ನಿರ್ಮಿಸುವುದರಿಂದ ಹಿಡಿದು ಅಡುಗೆ ತಯಾರಿಸುವವರೆಗೆ ತಮ್ಮ ಅಗತ್ಯಗಳನ್ನು ತಾವೇ ಪೂರೈಸಿಕೊಂಡು ಸ್ವಾವಲಂಬನೆಯ ಅನುಭವ ಪಡೆದರು.
ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿಘ್ನವಿನಾಶಕ ಗಣಪನ ಮೂರ್ತಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಗಣಪನಿಗೆ ರೂಪ ನೀಡುವ ಕುಶಲಕರ್ಮಿಗಳಿಗೆ ಮಾತ್ರ ಅಗತ್ಯವಾದ ಮಣ್ಣಿನ ಕೊರತೆ ಎದುರಾಗಿದೆ.
ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.
ಮಣಿಪಾಲದ ಟೈಗರ್ ಸರ್ಕಲ್ನಿಂದ ಕೆನರಾ ಬ್ಯಾಂಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ರಸ್ತೆ ಕಿತ್ತುಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರನ್ನು ನಂಬಿ ದಾಖಲೆಯೊಂದಕ್ಕೆ ಹಾಕಿದ ಸಹಿಯೊಂದು ಅಮಾಯಕ ರಿಕ್ಷಾ ಚಾಲಕನೊಬ್ಬನನ್ನು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯನ್ನಾಗಿ ಮಾಡಿತ್ತು.
ಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದನ್ನು ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಇಡಿ, ಆದಾಯ ತೆರಿಗೆ ಇಲಾಖೆ
ಸಮೀಕ್ಷೆಯ ಸಮಯದಲ್ಲಿ ಈ ಅಪರೂಪದ ವೀರಗಲ್ಲು ದೇವಸ್ಥಾನದ ಹೊರ ಪ್ರಾಂಗಣದಲ್ಲಿ ಕಂಡುಬಂದಿದೆ ಎಂದು ಪುರಾತತ್ವಶಾಸ್ತ್ರಜ್ಞ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.
ಮರಿಯಮ್ಮನ ಜನ್ಮವನ್ನು ಸ್ಮರಿಸುವ ಈ ಹಬ್ಬವು ದೇವರ ಕೃಪೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಕುಟುಂಬದ ಏಕತೆ, ಹೆಣ್ಣುಮಗುವಿನ ಘನತೆ, ಹೊಸ ಬೆಳೆಯ ಕೃತಜ್ಞತೆ ಮತ್ತು ಸೃಷ್ಟಿಯ ಸಂರಕ್ಷಣೆಯ ಮೌಲ್ಯಗಳನ್ನು ನಮ್ಮ ಮುಂದೆ ತೆರೆದಿಡುತ್ತದೆ.
ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು
ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಬಿದ್ದು ಕೃಷ್ಣನ ಮೂರ್ತಿ ಭಗ್ನವಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ಬಿಸಿಲು ಕಂಡುಬಂತು.
ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಶನಿವಾರ ಸಂಭವಿಸಿದೆ.
ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡವೊಂದು ನಡೆದಿದೆ.
ನರ್ಸ್ ವೇಷಧಾರಿ ಒಂದು ಕೈಯಲ್ಲಿ ಇಂಜೆಕ್ಷನ್ ಹಿಡಿದುಕೊಂಡಿದ್ದರೆ, ಇನ್ನೊಂದು ಕೈಯಲ್ಲಿ ಮಲೇರಿಯಾ ರೋಗದ ಮುಂಜಾಗ್ರತಾ ಕ್ರಮಗಳು ಹಾಗೂ ನಿಯಂತ್ರಣದ ಕುರಿತು ಮಾಹಿತಿ ನೀಡುವ ಫಲಕವನ್ನು ಹಿಡಿದಿದ್ದರು.
ಕೃಷ್ಣಮಠದ ಬಲಪಾರ್ಶ್ವದಲ್ಲಿ ಇದಕ್ಕಾಗಿ ಅಂಗಣ ಸಿದ್ಧಗೊಳಿಸಲಾಗಿತ್ತು.ವಿಟ್ಲಪಿಂಡಿ ಉತ್ಸವ ಸಂದರ್ಭ ಸಾವಿರಾರು ಭಕ್ತರು ಮಲ್ಲಯುದ್ಧವನ್ನು ಕಣ್ತುಂಬಿಕೊಂಡು ರೋಮಾಂಚನಗೊಂಡರು.