Showing 20 of 3348 posts • Page 7 of 168
ವಿಟ್ಲಪಿಂಡಿ ವೈಭವದ ವೈವಿಧ್ಯಮಯ ವೇಷಗಳ ನಡುವೆ ‘ವಿಜಯ್’ ಆಗಮನವೂ ಈ ಬಾರಿಯ ಉತ್ಸವದ ವಿಶೇಷ ಆಕರ್ಷಣೆಯಾಗಿ ಜನಮನ ಸೆಳೆಯಿತು.
ಹುಲಿವೇಷ ಧರಿಸಿದ್ದ ತಂಡದ ಸದಸ್ಯರು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಕುಣಿದು ಸಂಭ್ರಮಿಸಿದ್ದಾರೆ. ಪುಟ್ಟ ಮಗುವಿಗೂ ಹುಲಿವೇಷ ಹಾಕಿರುವ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಧಾರ್ಮಿಕ ವಿಧಿ ಮಠದ ಪರಿಸರದಲ್ಲಿ ವಿಶೇಷ ಭಕ್ತಿಯ ವಾತಾವರಣ ಸೃಷ್ಟಿಸಿತು. ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷವಾಗಿ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನಿಗೆ ಅರ್ಘ್ಯ […]
ವೇಷಧಾರಿಗಳ ಚೇಷ್ಟೆ ಹಾಗೂ ವಿಶಿಷ್ಟ ಕುಣಿತಕ್ಕೆ ಮಕ್ಕಳು ಸೇರಿದಂತೆ ಸಾರ್ವಜನಿಕರು ಫಿದಾ ಆಗಿದ್ದು, ಉಡುಪಿ ನಗರ ಕೃಷ್ಣಾಷ್ಟಮಿ ಸಂಭ್ರಮದಲ್ಲಿ ಸಂಪೂರ್ಣವಾಗಿ ಮಿಂದೇಳುತ್ತಿದೆ. ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ರಥಬೀದಿ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕರ ಸಂಚಾರ ಹೆಚ್ಚಿದ್ದು, ಎಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ 2026ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 16ಶಿಕ್ಷಕರು ಆಯ್ಕೆಯಾಗಿದ್ದಾರೆ.
ಪುಟ್ಟ ಮಕ್ಕಳ ಕೃಷ್ಣವೇಷ, ಅವರ ಮುಗ್ಧ ನಗು, ತುಂಟಾಟ ಮತ್ತು ಹೆಜ್ಜೆಗಳಿಗೆ ಸಾಕ್ಷಿಯಾದ ಜೂನಿಯರ್ ಮುದ್ದುಕೃಷ್ಣ ಸ್ಪರ್ಧೆ ಉಡುಪಿ ಶ್ರೀಕೃಷ್ಣ ಮಠದ ಅನ್ನಬ್ರಹ್ಮ ಛತ್ರದಲ್ಲಿ ಶುಕ್ರವಾರ ವಿಶೇಷ ಸಂಭ್ರಮ ಮೂಡಿಸಿತು.
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸುಮಾರು 10 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಅತ್ತೂರು ಪದವು ಗ್ರಾಮದ ಐಶ್ವರ್ಯ ಆಚಾರ್ಯ (28) ಮೃತಪಟ್ಟವರು.
ಈ ಬಾರಿ ಉಡುಪಿ ನಗರದಲ್ಲಿ 40ಕ್ಕೂ ಅಧಿಕ ಹುಲಿವೇಷ ತಂಡಗಳು ಅಷ್ಟಮಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಪ್ರದಾಯಿಕ ಹುಲಿವೇಷಗಳ ಜತೆಗೆ ಮಹಿಳೆಯರ ಹುಲಿವೇಷ ತಂಡಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಕಳೆದ ಹದಿನಾಲ್ಕು ವರ್ಷಗಳಿಂದ ಕೃಷ್ಣಾಷ್ಟಮಿ ಸಂದರ್ಭದಲ್ಲಿ ವಿಭಿನ್ನ ಮತ್ತು ವಿಶಿಷ್ಟ ವೇಷಗಳನ್ನು ಧರಿಸಿ ಸಾರ್ವಜನಿಕರಿಂದ ನೆರವು ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರು ಈ ಬಾರಿ ಕಾಲ್ಪನಿಕ ಸಮುದ್ರ ಜೀವಿಯ ರೂಪವಾದ ‘ಮರ್ಮೇನ್’ (Merman) ವೇಷದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಒಂದು ವರ್ಷದ ಹಿಂದೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮುಂಬರುವ ನವೆಂಬರ್ನಲ್ಲಿ ಅವರ ವಿವಾಹ ನಡೆಯಬೇಕಿತ್ತು ಎಂದು ಮೂಲಗಳು ತಿಳಿಸಿವೆ.
ಶ್ರೀಕೃಷ್ಣನ ಜನ್ಮದಿನವಾದ ಕೃಷ್ಣಜನ್ಮಾಷ್ಟಮಿಯ ಸಂಭ್ರಮಕ್ಕೆ ಉಡುಪಿ ಸಜ್ಜಾಗಿದ್ದು, ಇಂದು ಹಾಗೂ ನಾಳೆ ಮಠದಲ್ಲಿ ಮತ್ತು ನಗರದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಕೃಷ್ಣನೂರಿನ ಅಷ್ಟಮಿ ವೈಭವದಲ್ಲಿ ಹುಲಿವೇಷದ ಗರ್ಜನೆ ಕೇಳಲು ಜನರು ಕಾತರದಿಂದ ಕಾಯುತ್ತಿದ್ದು, ಎರಡು ದಿನಗಳ ಕಾಲ ಉಡುಪಿ ನಗರ ಹಬ್ಬದ ಸಂಭ್ರಮದಲ್ಲಿ ಮುಳುಗಲಿದೆ.
ಕೃಷ್ಣಭಕ್ತಿ ಮತ್ತು ಜಾನಪದ ಕಲೆಯ ಅಪೂರ್ವ ಸಂಗಮಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ಮತ್ತೊಮ್ಮೆ ಸಾಕ್ಷಿಯಾಗಲಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಉಡುಪಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕೃಷ್ಣನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ.
ಕೃಷ್ಣನ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ವೈಭವಕ್ಕೆ ಸಜ್ಜಾಗುತ್ತಿದೆ.
ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಮೈಸೂರು ನಗರದಲ್ಲಿ ಬಂಧಿಸಿದ್ದಾರೆ.
ಥೈಲ್ಯಾಂಡ್ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಅರಬ್ಬಿ ಸಮುದ್ರದ ಅಬ್ಬರದಿಂದ ಉಡುಪಿ ಕರಾವಳಿಯ ಹಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ತೀರ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಉಡುಪಿ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ವೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟಿನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಳೆದ ವಾರವಷ್ಟೇ ಇದೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ವೊಂದು ಸಂಪೂರ್ಣ ಮುಳುಗಡೆಯಾಗಿತ್ತು. ಆ ವೇಳೆ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿ ಬೋಟಿನಲ್ಲಿದ್ದ ಎಲ್ಲ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ […]