Showing 20 of 3348 posts • Page 8 of 168
ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಬಸ್ಟ್ಯಾಂಡ್ ಮುಂಭಾಗದಲ್ಲಿ ಮಗುಚಿಬಿದ್ದಿದ್ದು, ಅದರಲ್ಲಿದ್ದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದರ ಪರಿಣಾಮ ಕೆಲಕಾಲ ಸ್ಥಳದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು. ಡಿಕ್ಕಿಯ ತೀವ್ರತೆಗೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು […]
ಪ್ರಕರಣಗಳ ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಅವುಗಳನ್ನು ಪ್ರಕರಣದೊಂದಿಗೆ ಜೋಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವುದು ಅತ್ಯಂತ ಮುಖ್ಯ. ಇದರಿಂದ ಆರೋಪಿಗೆ ಶಿಕ್ಷೆ ಕೊಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ.
ಶ್ರೀಕೃಷ್ಣಾಷ್ಟಮಿ ಅಂಗವಾಗಿ ಮಲ್ಪೆ ಲಕ್ಷ್ಮೀನಗರದ ಶ್ರೀ ಸಿದ್ದಿ ಇವೆಂಟ್ಸ್ ವತಿಯಿಂದ ವಿಶೇಷ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಕಚೇರಿಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟಿಕರ್ ಅಂಟಿಸುವುದಾಗಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬುಧವಾರ ಶಾಸಕ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚಿವ ನಾಗೇಂದ್ರ ರಾಜೀನಾಮೆ ನೀಡಿರುವ ಬೆಳವಣಿಗೆಗೆ ಪ್ರತಿಕ್ರಿಯೆಯಾಗಿ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ಉದ್ಯೋಗದ ಅವಕಾಶಗಳು ಎದುರಾದರೂ ಸ್ವಂತ ಊರು, ಮಣ್ಣು ಹಾಗೂ ಕೃಷಿಯ ಮೇಲಿನ ಪ್ರೀತಿಯಿಂದ ಕೃಷಿಯಲ್ಲೇ ಹೊಸ ಪ್ರಯೋಗಗಳನ್ನು ನಡೆಸಿ ಯಶಸ್ಸು ಕಂಡಿದ್ದಾರೆ ಶಂಕರಪುರದ ಪಾಂಬೂರು ನಿವಾಸಿ ಇಗ್ನೇಷಿಯಸ್ ಡಿ’ಸೋಜಾ.
ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.
‘ಭಾರತ್ ಜೋಡಣೆ’ ಹೆಸರಿನಲ್ಲಿ ಯುವಕರನ್ನು ಸಂಘಟಿಸಿ ಅವರಲ್ಲಿ ರಾಷ್ಟ್ರಭಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವ ಉದ್ದೇಶಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಹಣ ಮತ್ತು ವ್ಯವಸ್ಥೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
‘ಇಸ್ಲಾಂ ಧರ್ಮ ಶ್ರೇಷ್ಠ’ ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯನ್ನು ತೋರಿಸುತ್ತದೆ.
ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿ ಆಧರಿಸಿ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಕರಡು ಅಧಿಸೂಚನೆಯ ಸಾಧಕ–ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಪ್ರವೀಣ್ ಎಂ. ಪೂಜಾರಿ ನೇತೃತ್ವದಲ್ಲಿ ಉಡುಪಿಯಿಂದ ಹೆಜಮಾಡಿವರೆಗೆ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ಕ್ಕೆ ಕಾಪು ಮತ್ತು ಮೂಳೂರಿನಲ್ಲಿ ವಿವಿಧ ಧರ್ಮೀಯರು ಸೌಹಾರ್ದ ಸ್ವಾಗತ ನೀಡಿದರು.
ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಮಣಿಪಾಲದ ರಾಜೀವನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧೆಯೊಬ್ಬರ ಶವವು ಕೊಳೆತ ಸ್ಥಿತಿಯಲ್ಲಿ ಮನೆಯ ಸಮೀಪದ ಗುಡ್ಡೆಯಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.
ಶ್ರೀಕೃಷ್ಣ ಮಠದಲ್ಲಿ ಇತ್ತೀಚೆಗೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಾಳಸರ್ಪ ಯೋಗದ ಪರಿಣಾಮದಿಂದ ಜಗತ್ತಿನಲ್ಲಿ ವಿವಿಧ ಅನಾಹುತಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪ್ರಸ್ತಾಪವಾಗಿದೆ ಎಂದು ಮಠದ ಪ್ರಮುಖರು ತಿಳಿಸಿದ್ದಾರೆ.
ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮೀನುಗಾರರ ಸಂಕಷ್ಟದ ಬೆನ್ನಲ್ಲೇ ಇದೀಗ ಕೃಷಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಕಳೆದ 14 ವರ್ಷಗಳಿಂದ ವಿವಿಧ ವೇಷ ಧರಿಸಿ ಹಣ ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ಸಮಾಜಸೇವಕ ರವಿ ಕಟಪಾಡಿ ಹಾಗೂ ಅವರ ತಂಡ, ಈ ಬಾರಿ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್ನಿಂದ ಬಳಲುತ್ತಿರುವ ಪುಟಾಣಿ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲು ನಿರ್ಧರಿಸಿದೆ.
ಏಳು ವರ್ಷಗಳ ಹಿಂದೆ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಪ್ಪಿತಸ್ಥರೆಂದು ತೀರ್ಮಾನಿಸಿರುವ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿಗಳಿಗೆ ವಿವಿಧ ಪ್ರಕರಣಗಳಡಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಕೃಷ್ಣನೂರು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು, ಅಷ್ಟಮಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣಮಠದ ಸುತ್ತಮುತ್ತ ಹಾಗೂ ರಥಬೀದಿಯಲ್ಲಿ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಅಷ್ಟಮಿ ಸಂಭ್ರಮಕ್ಕೆ ಕರಾವಳಿಯ ಜನಪದ ಸೊಗಡಿನ ಹುಲಿವೇಷ ಮತ್ತಷ್ಟು ಮೆರುಗು ನೀಡಲಿದೆ.