Showing 20 of 3348 posts • Page 9 of 168
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆ.27ರಂದು ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಿನ್ನೆಲೆ ಹಾಗೂ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ. ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು […]
ಮಳೆಗಾಲದ ಎರಡು ತಿಂಗಳ ಮೀನುಗಾರಿಕೆ ರಜೆ ಪೂರ್ಣಗೊಂಡಿದ್ದು, ಪಶ್ಚಿಮ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಚುರುಕುಗೊಂಡಿದೆ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮನೆಮನೆಗೆ ಪೈಪ್ಲೈನ್ ಮೂಲಕ ಅಡುಗೆ ಅನಿಲ ಪೂರೈಸುವ ಯೋಜನೆಯಡಿ ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರದಲ್ಲಿ ಗ್ಯಾಸ್ ವಿತರಣೆ ಆರಂಭಿಸುವುದಾಗಿ ಅದಾನಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು.
ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಉಡುಪಿ ನಗರ ಠಾಣೆ ಪೊಲೀಸರು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೆರಂಪಳ್ಳಿ ಸಂತೋಷನಗರದ ಅರುಣ್ ಎಸ್.ವಿ. (43) ಹಾಗೂ ತೆಂಕನಿಡಿಯೂರು ಗ್ರಾಮದ ಕೌಶೀಕ್ (19) ಬಂಧಿತರು. ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದುಬೈಯಲ್ಲಿದ್ದ ಅವರು ಊರಿಗೆ ಬಂದ […]
ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ.
ಮೀನುಗಾರಿಕೆಗೆ ಹೆಸರುವಾಸಿಯಾದ ಉಡುಪಿ ಜಿಲ್ಲೆಯಲ್ಲಿ ಹವ್ಯಾಸಿ ಮೀನುಗಾರರು ಗಾಳ ಹಾಕಿ ಮೀನು ಹಿಡಿಯುವ ವಿಶಿಷ್ಟ ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಉಡುಪಿ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಹೆಬ್ರಿ ತಾಲ್ಲೂಕಿನ ಕನ್ಯಾನ ಸಮೀಪ ನಡೆದಿದೆ.
ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರ್ ಅವರ ಜನ್ಮದಿನಾಚರಣೆಯಾದ ಮೀಲಾದುನ್ನಬಿಯನ್ನು ಮಂಗಳವಾರ ಉಡುಪಿ ತಾಲೂಕಿನಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟ್ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್ನ ಕೋಟ್ಯಂತರ ರೂಪಾಯಿ ಮೊತ್ತದ ಗುತ್ತಿಗೆ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದ ಗುತ್ತಿಗೆದಾರ ಕಿಶೋರ್ ರಾಮ ಪೂಜಾರಿ ₹10 ಲಕ್ಷಕ್ಕೆ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸರು ಸೋಮವಾರ ಕುಂದಾಪುರ ಪುರಸಭೆ ಕಚೇರಿಗೆ ದಿಢೀರ್ ದಾಳಿ ನಡೆಸಿ, ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.
ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಬ್ರಹ್ಮಾವರ ತಾಲ್ಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ಪುತ್ರನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.