News Karnataka Kannada
Friday, April 12 2024
Cricket
Uncategorized

ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಐದು ಚೀತಾ ಮರಿಗಳ ಜನನ

New Project
Photo Credit : Twitter

ವದೆಹಲಿ:  ನಮೀಬಿಯಾದಿಂದ ತಂದಿದ್ದ ಚೀತಾವು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌ ತಿಳಿಸಿದ್ದಾರೆ.

ಈ ವಿಷಯವನ್ನು ‘ಎಕ್ಸ್‌’ ಮೂಲಕ ತಿಳಿಸಿರುವ ಯಾದವ್, ‘ಹೈ ಫೈವ್, ಕುನೋ! ದಕ್ಷಿಣ ಆಫ್ರಿಕಾದಿಂದ ತರಲಾದ 5 ವರ್ಷದ ‘ಗಾಮಿನಿ’ ಹೆಸರಿನ ಚೀತಾವು 5 ಮರಿಗಳಿಗೆ ಜನ್ಮ ನೀಡಿದೆ. ಇದರಿಂದ ನಮ್ಮ ಸಂತೋಷ ದುಪ್ಪಟ್ಟಾಗಿದೆ. ಎಲ್ಲರಿಗೂ ಅಭಿನಂದನೆಗಳು’ ಎಂದು ಹೇಳಿದ್ದಾರೆ.

ಇದು ಭಾರತದ ನೆಲದಲ್ಲಿ ಮರಿಗಳಿಗೆ ಜನ್ಮ ನೀಡಿದ ನಾಲ್ಕನೇ ಚೀತಾ ಇದಾಗಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಜ್ವಾಲಾ ಹೆಸರಿನ ಚೀತಾವು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಅವುಗಳ ಪೈಕಿ ಒಂದು ಮರಿ ಮಾತ್ರ ಬದುಕುಳಿಯುವಲ್ಲಿ ಯಶಸ್ವಿಯಾಗಿತ್ತು. ಇದಕ್ಕೂ ಮುನ್ನ ಆಶಾ ಹೆಸರಿನ ಚೀತಾವು ಮೂರು ಮರಿಗಳಿಗೆ ಜನ್ಮ ನೀಡಿತ್ತು. ಇದರೊಂದಿಗೆ ಕುನೊ ಉದ್ಯಾನವನದಲ್ಲಿ ಮರಿಗಳು ಸೇರಿದಂತೆ ಒಟ್ಟು ಚೀತಾಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಕಳೆದ ವರ್ಷದಿಂದ ಇಲ್ಲಿಯವರೆಗೆ ಕುನೊದಲ್ಲಿ ಒಟ್ಟು 10 ಚೀತಾ ಮೃತಪಟ್ಟಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು