Showing 20 of 85 posts • Page 1 of 5
ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದು, 11 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕದಲ್ಲಿ ನಡೆದಿದೆ.
ಹದಿನಾರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅಭಿನಂದನ್ ಗೌಡ ಎಂಬಾತನನ್ನು ಬಂಧಿಸಲಾಗಿದೆ.
ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ನಡೆದಿದೆ.
ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ. ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ ಜೊತೆ ಕಡ್ಲೆ ಸಮುದ್ರತೀರದಲ್ಲಿ ರೀಲ್ಸ್ ಮಾಡಲು […]
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಖಾಸಗಿ ಲಕ್ಸುರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಇಂದು (ಶನಿವಾರ) ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ.
ತಾಯಿಯ ಮಮತೆ ಮತ್ತು ಕ್ಷಮತೆಗೆ ಯಾವುದೇ ಬೆಲೆ ಕಟ್ಟಲು ಸಾಧ್ಯವಿಲ್ಲ.
ಸಿದ್ದಾಪುರ ತಾಲೂಕ್ ಉತ್ತರಕನ್ನಡ ಜಿಲ್ಲೆಯ ಕಾನಗೋಡ್ ಗ್ರಾಮದಲ್ಲಿ ಅಕ್ರಮ ಗೋವು ಸಾಗಾಣಿಕೆ ವಾಹನವನ್ನು ಸಿದ್ದಾಪುರದ ಭಜರಂಗ ದಳದ ಹರೀಶ್ ಕುಮಾರ್ ಹಿಡಿದಿದ್ದಾರೆ.
ಗೋಕರ್ಣದ ಸುತ್ತಮುತ್ತ ಅಕ್ರಮ ರೆಸಾರ್ಟ್ ಹಾವಳಿ ಹೆಚ್ಚಾಗಿದೆ. ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ರೂಲ್ಸ್ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ಇಲ್ಲಿನ ಪೊಲೀಸರು ದಾಳಿ ನಡೆಸಿ ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಐದಾರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಎಂಟು ಜನ ಅನ್ಯಕೋಮಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಆರು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಸಿರ್ಸಿ ಸಮೀಪದ ಸಿರ್ಸಿಮಕ್ಕಿ ಬಳಿ ಶನಿವಾರ ನಡೆದಿದೆ.
ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ.
ಖ್ಯಾತ ಜ್ಯೋತಿಷಿಯೊಂದಿಗೆ ಮಹಿಳೆ ಅನೈತಿಕ ಸಂಬಂಧ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದೆ.
ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಿರಸಿ ತಾಲೂಕಿನ ಬಳಗೇರಿ ಸರಗುಪ್ಪಾದಲ್ಲಿ ಜ.09 ರಂದು 18-00 ಗಂಟೆಯಿಂದ ಜ.10 ರಂದು ಬೆಳಿಗ್ಗೆ 06-00 ಗಂಟೆಯ ನಡುವಿನ ಅವಧಿಯಲ್ಲಿ ಬಳಗೇರಿ ಗ್ರಾಮದ ನಿವಾಸಿ ರಾಮಚಂದ್ರ ತಂದೆ ನರಸಿಂಹ ಗೌಡ ಮತ್ತು ಅವರ ಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು ಮೂರು ಹೊರಿಗಳನ್ನು ಕಳ್ಳತನ ಮಾಡಲಾಗಿದೆ.
ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ.
ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.