ಅಂಕೋಲಾ: ಶಿರೂರು ಬಳಿ ಗುಡ್ಡ ಕುಸಿದ ಪರಿಣಾಮ ಕೆಲ ದಿನಗಳಿಂದ ವಾಹನ ಸಂಚಾರ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ.

ಜುಲೈ 16ರಂದು ಶಿರೂರು ಬಳಿ ಹೆದ್ದಾರಿಯಲ್ಲಿ ಭೀಕರವಾಗಿ ಗುಡ್ಡಕುಸಿತ ಉಂಟಾಗಿ ಮಂಗಳೂರು – ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಇದೀಗ ಪುನಾರಂಭಗೊಂಡಿದೆ.

ರಸ್ತೆಯಲ್ಲಿರುವ ಮಣ್ಣು ತೆರವು ಮಾಡಿದ್ದರ ಹಿನ್ನೆಲೆಯಲ್ಲಿ ರಸ್ತೆಯ ಮೇಲೆ ವಾಹನ ಒಡಾಟಕ್ಕೆ ಜಿಲ್ಲಾಧಿಕಾರಿ ಅನುಮತಿ‌ ನೀಡದ್ದಾರೆ. ಸದ್ಯಕ್ಕೆ ಹೆದ್ದಾರಿಯ ಮೇಲೆ ಏಕಮುಖ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು ಎರಡು ಬದಿಯಲ್ಲಿ ನಾಪಫಲಕ ಅಳವಡಿಸಲು ಐಆರ್ ಬಿ ಗೆ ಸೂಚಿಸಿದ್ದಾರೆ.