ಕಾರವಾರ: ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ನಂಬರ್ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದ್ದು, ಇದೇ ಕಾರಣದಿಂದ ಕಾರು ಮತ್ತು ಅದರ ಸವಾರರ ಗುರುತು ಪತ್ತೆ ಹಚ್ಚಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ತನಿಖೆಗೋಸ್ಕರ, ಮೃತರು ಸಿದ್ದಾಪುರ ಮೂಲದವರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳದಲ್ಲಿ ಹೊನ್ನಾವರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.