ಅಂಕೋಲಾ: ಕೆಲವು ದಿನದಿಂದ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಂಗಳವಾರ(ಜು.16ರಂದು) ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಎರಡು ಕುಟುಂಬದ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದಾರೆ ಎನ್ನಲಾಗುತ್ತಿದೆ. ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

