ಹೊನ್ನಾವರ: ಯಕ್ಷಗಾನದ ರಂಗದ ಬಡಗು ತಿಟ್ಟಿನ ಮೇರು ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ನಿಧನ ಹೊಂದಿದ್ದಾರೆ.
ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1950ರಲ್ಲಿ ಈಶ್ವರ ಹೆಗಡೆ ಮತ್ತು ಗೋಪಿ ದಂಪತಿಗಳ ಪುತ್ರನಾಗಿ ಜನಿಸಿದ ಮಹಾದೇವ ಹೆಗಡೆಯವರು ತನ್ನ 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದ್ದರು. ಹೆಗಡೆಯವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿತ್ತು. ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಹೆಸರಾಂತ ಭಾಗವತರು.
ಭೀಷ್ಮ, ಅಶ್ವತ್ಥಾಮ, ವಲಲ ಮುಂತಾದ ಇವರ ಪಾತ್ರಗಳು ಮಹಾಬಲ ಹೆಗಡೆಯವರಂತೆಯೇ ರಂಗದಲ್ಲಿ ತೋರಿಸಿದ್ದರು. ನಾಯಕ ಪ್ರತಿನಾಯಕ ಎರಡೂ ಪಾತ್ರಗಳನ್ನು ಸಮಾನವಾಗಿ ನಿರ್ವಹಿಸುವ ಸಾಮರ್ಥ್ಯವಿತ್ತು. ಭೀಮ, ವಲಲ, ಸುಗ್ರೀವ, ವಾಲಿ. ರಾಮ, ಮಹೋಗ್ರ, ಜಮದಗ್ನಿ, ರಾವಣ, ಮಾಗದ, ಹರಿಶ್ಚಂದ್ರ, ವಿಶ್ವಾಮಿತ್ರ ಮುಂತಾದ ಪಾತ್ರಗಳ ಮೂಲಕ ಖ್ಯಾತರಾಗಿದ್ದರು.

