ಉತ್ತರ ಕನ್ನಡ : ಐದಾರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಎಂಟು ಜನ ಅನ್ಯಕೋಮಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಬೈಲರಿನಲ್ಲಿ ರಾತ್ರಿ 10 ಗಂಟೆಯ ನಂತರ ಬೈಲೂರು ಮಾರ್ಗದ ತೆಂಗಾರ್ ರಸ್ತೆಯಲ್ಲಿ 3 ಬೈಕ್ ನಲ್ಲಿ ಬಂದ ಆರು ಜನ ಅನ್ಯಕೋಮಿ ಯುವಕರು ಬೈಲೂರಿನ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಇಬ್ಬರನ್ನು ಹಿಡಿದು ಮುರುಡೇಶ್ವರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಕಲ್ಲು ತೂರಾಟ ನಡೆಸಿದ್ದ ಒಟ್ಟು ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಪಟ್ಟಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಬಳಿ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆಗಳು ಜಮಾಯಿಸಿದ್ದು, ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

