ವಿಜಯನಗರ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ನಡೆದಿದೆ.
ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.
ಬೈಕ್ನಲ್ಲಿದ್ದವರು ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಸ್ಪೀಡಾಗಿ ಬಂದ ಕಾರು ಬೈಕ್ಗೆ ಗುದ್ದಿದೆ. ಗುದ್ದಿದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

