ಹೊಸಪೇಟೆ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 26 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಿತ್ತವಾಡ್ಗಿ ಠಾಣೆ ವ್ಯಾಪ್ತಿಯಲ್ಲಿ ಆಟೋದಲ್ಲಿ ಸಾಗಿಸುತ್ತಿದ್ದ ಎರಡು ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿ ಓರ್ವನನ್ನು ಬಂಧಿಸಲಾಗಿದೆ.
ಕೊಟ್ಟೂರು ಪಟ್ತಣದ ಪಾಳ್ಯ ರಸ್ತೆಯ ಎಂಆರ್ಪಿಎಲ್ ಪೆಟ್ರೋಲ್ ಬಂಕ್ ಬಳಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ 24.30 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ.
ವಿಜಯನಗರದಲ್ಲಿ 331 ಕ್ವಿಂಟಾಲ್ ಅಕ್ಕಿ ವಶಕ್ಕೆ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ದೊಡ್ಡ ಜಾಲವೊಂದನ್ನು ಭೇದಿಸಿರುವ ಗ್ರಾಮೀಣ ಠಾಣೆ ಪೊಲೀಸರು, ₹11.25 ಲಕ್ಷ ಮೌಲ್ಯದ 331 ಕ್ವಿಂಟಲ್ ಅಕ್ಕಿ ಮತ್ತು ಅದನ್ನು ಸಾಗಿಸಲು ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಳ್ಳಾರಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಜಂಬುನಾಥ ರಸ್ತೆಯ ಕಿರು ಸೇತುವೆ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಪಡಿತರ ಅಕ್ಕಿಯ ಅಕ್ರಮ ಸಾಗಣೆ ಬಯಲಾಗಿದೆ. ಪ್ರಕರಣ ಸಂಬಂಧ ಲಾರಿ ಚಾಲಕ ಸಹಿತ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಳ್ಳಲಾದ ಲಾರಿಯ ಮೌಲ್ಯ 25 ಲಕ್ಷ ಎಂದು ಅವರು ಮಾಹಿತಿ ನೀಡಿದ್ದಾರೆ.

