ವಿಜಯನಗರ: ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಡದಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮೊದಲಿಗೆ ಕಾರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ.
ಹೊಸಪೇಟೆಯಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
— Ballari Tweetz (@TweetzBallari) April 19, 2026

