News Karnataka Kannada
Friday, April 19 2024
Cricket
ವಿದೇಶ

ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ; ಸಾಬೀತಾಯಿತು ಗೌತಮ್ ಗಂಭೀರ್ ಫೌಂಡೇಷನ್ ನ ಅಪರಾಧ

Photo Credit :

ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ; ಸಾಬೀತಾಯಿತು ಗೌತಮ್ ಗಂಭೀರ್ ಫೌಂಡೇಷನ್ ನ ಅಪರಾಧ

ನವದೆಹಲಿ: ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುವ ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಷನ್ ನ ಅಪರಾಧ ಸಾಬೀತಾಗಿದೆ ಎಂದು ದೆಹಲಿ ಹೈಕೋರ್ಟ್ ಗೆ ದೆಹಲಿ ಸರ್ಕಾರ ಹೇಳಿದೆ.

ಹೌದು.. ಕೋವಿಡ್-19 ರೋಗಿಗಳ ಔಷಧಿಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿ ವಿತರಣೆ ಮಾಡಿದ್ದ ಆರೋಪದಲ್ಲಿ ಗೌತಮ್ ಗಂಭೀರ್ ಪ್ರತಿಷ್ಠಾನವು ತಪ್ಪಿತಸ್ಥರೆಂದು ದೆಹಲಿ ಹೈಕೋರ್ಟ್‌ ಹೇಳಿದೆ. ಕೋವಿಡ್ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿದ್ದ ಅತ್ಯಾವಶ್ಯಕ ಫ್ಯಾಬಿ ಫ್ಲೂ ಮಾತ್ರೆಗಳನ್ನು ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಸಂಗ್ರಹಿಸಿ ವಿತರಣೆ ಮಾಡಿತ್ತು.

ಈ ಬಗ್ಗೆ ಗಮನ ಹರಿಸಿದ್ದ ದೆಹಲಿ ಹೈಕೋರ್ಟ್ ದೇಶಾದ್ಯಂತ ವ್ಯಾಪಕ ಕೊರತೆ ಇರುವ ಪರಿಸ್ಥಿತಿಯಲ್ಲಿ ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಯಥೇಚ್ಛವಾಗಿ ಈ ಔಷಧಿಗಳನ್ನು ಸಂಗ್ರಹಿಸಿದ್ದು ಹೇಗೆ..?ಇದಕ್ಕೆ ಯಾವ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ದೆಹಲಿ ಹೈಕೋರ್ಟ್ ದೆಹಲಿಯ ಔಷಧ ನಿಯಂತ್ರಕರನ್ನು ಪ್ರಶ್ನಿಸಿತ್ತು.

ಈ ಸಂಬಂಧ ಕೋರ್ಟ್ ಗೆ ವರದಿ ನೀಡಿದ್ದ ದೆಹಲಿಯ ಔಷಧ ನಿಯಂತ್ರಕ ಇಲಾಖೆ, ಗೌತಮ್ ಗಂಭೀರ್ ಫೌಂಡೇಷನ್ ಅಕ್ರಮವಾಗಿ ಕೋವಿಡ್-19 ಔಷಧಿಗಳನ್ನು ಸಂಗ್ರಹಿಸಿ ವಿತರಣೆ ಮಾಡಿತ್ತು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಅಲ್ಲದೆ ಇಂತಹ ಪ್ರಕರಣಗಳು ಕಂಡುಬಂದರೆ ಮಾಹಿತಿ ನೀಡುವಂತೆ ಔಷಧ ಡೀಲರ್ ಗಳಿಗೆ ಸೂಚಿಸಲಾಗಿದೆ ಎಂದು ಹೇಳಿದೆ.

ಪ್ರಕರಣದ ವಿಚಾರಣೆಯಲ್ಲಿ ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಇದೇ ಪ್ರಕರಣದಲ್ಲಿ ಶಾಸಕ ಪ್ರವೀಣ್ ಕುಮಾರ್ ಅವರನ್ನೂ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ತಪ್ಪಿತಸ್ಥರು ಎಂದು ಹೇಳಿದೆ.

ಅಂತೆಯೇ ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಕುರಿತು ಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಪ್ರಾಧಿಕಾರವನ್ನು ಕೇಳಿದೆ ಮತ್ತು ಅಂತೆಯೇ ಜುಲೈ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು