News Karnataka Kannada
Wednesday, April 17 2024
Cricket
ವಿದೇಶ

ಅಲೋಪತಿ ಸ್ಟುಪಿಡ್‌: ವಿವಾದಾತ್ಮಕ ಹೇಳಿಕೆ ಹಿಂಪಡೆದ ಬಾಬಾ ರಾಮ್‌ದೇವ್‌

Photo Credit :

ಅಲೋಪತಿ ಸ್ಟುಪಿಡ್‌: ವಿವಾದಾತ್ಮಕ ಹೇಳಿಕೆ ಹಿಂಪಡೆದ ಬಾಬಾ ರಾಮ್‌ದೇವ್‌

ನವದೆಹಲಿ: ಅಲೋಪತಿ ಔಷಧಗಳ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಯೋಗ ಗುರು ಬಾಬಾ ರಾಮ್‌ದೇವ್ ಭಾನುವಾರ ರಾತ್ರಿ ಹಿಂಪಡೆದುಕೊಂಡಿದ್ದಾರೆ.‘ಅಲೋಪತಿ ಒಂದು ಅವಿವೇಕದ ವಿಜ್ಞಾನ. ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ಜನರು ಮೃತಪಟ್ಟಿದ್ದಾರೆ’ ಎಂಬುದಾಗಿ ರಾಮ್‌ದೇವ್ ಹೇಳಿದ್ದರು.
ರಾಮ್‌ದೇವ್‌ ಹೇಳಿಕೆಗೆ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ದೆಹಲಿ ವೈದ್ಯಕೀಯ ಸಂಘವು (ಡಿಎಂಎ) ದೆಹಲಿಯ ದರಿಯಾಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.ವಿವಾದದ ಹಿನ್ನೆಲೆಯಲ್ಲಿ ರಾಮ್‌ದೇವ್ ಅವರಿಗೆ ಪತ್ರ ಬರೆದಿದ್ದ ಆರೋಗ್ಯ ಸಚಿವ ಹರ್ಷವರ್ಧನ್ ‘ನಿಮ್ಮ ಹೇಳಿಕೆಯು ಕೊರೊನಾ ವಾರಿಯರ್‌ಗಳನ್ನು ಅಪಮಾನಿಸುತ್ತಿದೆ. ದೇಶದ ಜನರ ಭಾವನೆಗಳನ್ನು ಘಾಸಿಗೊಳಿಸುತ್ತಿದೆ. ಅಲೋಪತಿ ಕುರಿತ ನಿಮ್ಮ ಹೇಳಿಕೆಯು ಆರೋಗ್ಯ ಕಾರ್ಯಕರ್ತರ ಆತ್ಮಸ್ಥೈರ್ಯಕ್ಕೆ ಧಕ್ಕೆ ತರುತ್ತಿದೆ. ಕೋವಿಡ್‌ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತಿದೆ,’ ಎಂದಿದ್ದರು. ಅಲೋಪತಿ ಕುರಿತ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆಯೂ ರಾಮ್‌ದೇವ್‌ಗೆ ಸಚಿವರು ಆಗ್ರಹಿಸಿದ್ದರು.
ಆರೋಗ್ಯ ಸಚಿವರ ಪತ್ರಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ರಾಮ್‌ದೇವ್‌, ‘ಗೌರವಾನ್ವಿತ ಸಚಿವರೇ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಅಲೋಪತಿ ವೈದ್ಯಕೀಯ ಪದ್ಧತಿ ಕುರಿತ ಹೇಳಿಕೆಯನ್ನು ಹಿಂಪಡೆದುಕೊಳ್ಳುತ್ತೇನೆ’ ಎಂದು ರಾಮ್‌ದೇವ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು