News Karnataka Kannada
Saturday, April 13 2024
Cricket
ವಿದೇಶ

ಅಸ್ಸಾಂನಲ್ಲಿ ಭದ್ರತಾ ಪಡೆ ಗುಂಡೇಟಿಗೆ 6 ಡಿಎನ್ಎಲ್ಎ ಉಗ್ರರ ಸಾವು

Photo Credit :

ಅಸ್ಸಾಂನಲ್ಲಿ ಭದ್ರತಾ ಪಡೆ ಗುಂಡೇಟಿಗೆ 6 ಡಿಎನ್ಎಲ್ಎ ಉಗ್ರರ ಸಾವು

ನವದೆಹಲಿ, : ಅಸ್ಸಾಂ ಮತ್ತು ನಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ದಿಮಸಾ ನ್ಯಾಷನಲ್ ಲಿಬರೇಷನ್ ಆರ್ಮಿ(ಡಿಎನ್ಎಲ್ಎ) ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಡಿಎನ್ಎಲ್ಎ ಸಂಘಟನೆಯ 6 ಉಗ್ರರು ಮೃತಪಟ್ಟಿದ್ದಾರೆ.
ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿ ನಡೆಸಿರುವ ಪ್ರತಿದಾಳಿಯಲ್ಲಿ ಡಿಎನ್ಎಲ್ಎ ಸಂಘಟನೆಯ ಆರು ಉಗ್ರರು ಪ್ರಾಣ ಬಿಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದಿಮಸಾ ನ್ಯಾಷನಲ್ ಲಿಬರೇಷನ್ ಆರ್ಮಿಗೆ ಸೇರಿದ ಮೃತ ಆರು ಉಗ್ರರ ಬಳಿಯಿದ್ದ ನಾಲ್ಕು ಎಕೆ-47 ರೈಫಲ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮಿಚಿಬೈಲಂಗ್ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಅನುಮಾನ ವ್ಯಕ್ತವಾಗಿದ್ದು, ಸೇನಾ ಕಾರ್ಯಾರಣೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು