News Karnataka Kannada
Sunday, April 21 2024
Cricket
ವಿದೇಶ

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

Photo Credit :

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ ರವಿ ಅವರ ವೈಫಲ್ಯ, ನಾಯಕತ್ವ ಪ್ರದರ್ಶಿಸುವಲ್ಲಿ ವಿಫಲರಾಗಿರುವುದರ ಕುರಿತು, ಜೊತೆಗೆ ಕೆಲ ಕಡತಗಳನ್ನು ತಿದ್ದಿರುವ ಬಗ್ಗೆಯೂ ಉಲ್ಲೇಖಿಸಿದ್ದರಿಂದ ಅವರ ವರ್ಗಾವಣೆಗೆ ಒತ್ತಡವಿತ್ತು. ಹೀಗಾಗಿ ಮೂರು ತಿಂಗಳ ಹಿಂದೆ ಮಾಡಿದ್ದ ವರ್ಗಾವಣೆ ಆದೇಶದಂತೆ ಸರ್ಕಾರ ಅವರ ಸ್ಥಾನಕ್ಕೆ ಸತೀಶ್ ನೇಮಕಗೊಳಿಸಿದೆ ಎಂದು ತಿಳಿದುಬಂದಿದೆ.ಮತ್ತೊಂದು ಮೂಲಗಳ ಪ್ರಕಾರ, ಚಾಮರಾಜನಗರ ಡಿಸಿಯಾಗಿ ರವಿ ಅವರೇ ಮುಂದುವರೆಯಬೇಕೆಂದು ಕೆಲ ಬಿಜೆಪಿ ನಾಯಕರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು