News Karnataka Kannada
Monday, April 22 2024
Cricket
ವಿದೇಶ

ಆದಷ್ಟು ಬೇಗ ಭಾರತ ಬಿಡುವುದು ಸುರಕ್ಷಿತ; ನಾಗರಿಕರಿಗೆ ಅಮೆರಿಕ ಎಚ್ಚರಿಕೆ

Photo Credit :

ಆದಷ್ಟು ಬೇಗ ಭಾರತ ಬಿಡುವುದು ಸುರಕ್ಷಿತ; ನಾಗರಿಕರಿಗೆ ಅಮೆರಿಕ ಎಚ್ಚರಿಕೆ

ನವದೆಹಲಿ, : ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಯಾರೂ ಭಾರತಕ್ಕೆ ಹೋಗದಂತೆ ಹಾಗೂ ಭಾರತದಲ್ಲಿರುವವರು ಆದಷ್ಟು ಬೇಗ ದೇಶಕ್ಕೆ ಮರಳುವಂತೆ ಅಮೆರಿಕ ಸರ್ಕಾರ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಆರೋಗ್ಯ ಇಲಾಖೆ, ಭಾರತವನ್ನು ಬಿಟ್ಟು ಬರಲು ಇಚ್ಛಿಸುವ ನಾಗರಿಕರು ಈಗಿರುವ ವಾಣಿಜ್ಯ ಸಾರಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕು. ಸದ್ಯಕ್ಕೆ ಭಾರತದಿಂದ ಅಮೆರಿಕಕ್ಕೆ ದಿನನಿತ್ಯ ನೇರ ವಿಮಾನವಿದೆ. ಪ್ಯಾರಿಸ್ ಹಾಗೂ ಫ್ರಾಂಕ್‌ಫರ್ಟ್‌ನಿಂದ ಆಗಮಿಸುವ ವಿಮಾನಗಳೂ ಲಭ್ಯವಿವೆ ಎಂದು ತಿಳಿಸಿದೆ.
ಭಾರತದಲ್ಲಿ ದಾಖಲೆ ಮಟ್ಟದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಹಲವೆಡೆ ಪರೀಕ್ಷಾ ಮಟ್ಟವೂ ಕುಸಿದಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕ, ಹಾಸಿಗೆ, ಔಷಧಗಳ ಕೊರತೆ ಅಧಿಕವಾಗಿದೆ ಎಂದು ಅಮೆರಿಕ ರಾಯಭಾರಿ ಎಚ್ಚರಿಕೆ ನೀಡಿದೆ.ಹಲವು ರಾಷ್ಟ್ರಗಳು ಈಗಾಗಲೇ ಭಾರತದ ವಿಮಾನ ಸಂಪರ್ಕವನ್ನು ಕಡಿತಗೊಳಿಸಿವೆ.ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, ಗುರುವಾರ 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು