News Karnataka Kannada
Tuesday, April 23 2024
Cricket
ವಿದೇಶ

ಇದು ರಾಜ್ಯಗಳೊಂದಿಗೆ ಹೋರಾಡುವ ಸಮಯವಲ್ಲ : ಕೇಜ್ರೀವಾಲ್

Photo Credit :

ಇದು ರಾಜ್ಯಗಳೊಂದಿಗೆ ಹೋರಾಡುವ ಸಮಯವಲ್ಲ : ಕೇಜ್ರೀವಾಲ್

ನವದೆಹಲಿ: ಇದು ರಾಜ್ಯ ಸರ್ಕಾರಗಳೊಂದಿಗೆ ಹೋರಾಡುವ ಸಮಯವಲ್ಲ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎಲ್ಲರೂ ಒಟ್ಟಾಗಿ ಎದುರಿಸಬೇಕಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿರುವ ಬೆನ್ನಲ್ಲೇ ಸೃಷ್ಟಿಯಾಗಿರುವ ವಿವಾದದ ಕುರಿತಾಗಿ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಇದು ರಾಜ್ಯ ಸರ್ಕಾರಗಳೊಂದಿಗೆ ಹೋರಾಡುವ ಸಮಯವಲ್ಲ, ಎಲ್ಲರೂ ಒಟ್ಟಾಗಿ ಕೊರೊನಾವೈರಸ್ ವಿರುದ್ದ ಹೋರಾಡುವ ಸಮಯ. ರಾಜ್ಯ ಸರ್ಕಾರಗಳಿಗೆ ಸಹಾಯ ಮಾಡಲು, ಲಸಿಕೆಗಳನ್ನು ಒದಗಿಸಲು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಟೀಮ್ ಇಂಡಿಯಾದಂತೆ ಕೆಲಸ ಮಾಡುವ ಸಮಯ.ರಾಜಕೀಯಕ್ಕಾಗಿ ಇಡೀ ಜೀವನವೇ ಉಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಯಸ್ ಚಂಡಮಾರುತ ಹಾಗೂ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಕೈಗೊಂಡಿರುವ ನಿರ್ಧಾರ ಸರಿಯಲ್ಲ. ಇದರಲ್ಲಿ ದ್ವೇಷದ ರಾಜಕಾರಣ ಅಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಪಶ್ಚಿಮ ಬಂಗಾಳದ 1987ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಬಂಡೋಪಾಧ್ಯಾಯರಿಗೆ 60 ವರ್ಷ ತುಂಬಿದ ನಂತರ ಮೇ 31ರಂದು ನಿವೃತ್ತಿ ಹೊಂದಬೇಕಿತ್ತು. ಆದರೆ ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ಕೇಂದ್ರದಿಂದ ಅನುಮೋದನೆ ಲಭಿಸಿದ ಬಳಿಕ ಅವರ ಸೇವೆಯು ಮೂರು ತಿಂಗಳಿಗೆ ವಿಸ್ತರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು