News Karnataka Kannada
Friday, April 12 2024
Cricket
ವಿದೇಶ

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

Photo Credit :

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

ತಿರುವನಂತಪುರಂ; ಸತತ ಎರಡನೇ ಬಾರಿಗೆ ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಆರೀಪ್ ಮಹಮ್ಮದ್ ಖಾನ್ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ 91 ಸೀಟುಗಳನ್ನು ಗೆಲ್ಲುವ ಮೂಲಕ ಮತ್ತೆ ಕೇರಳದ ಆಡಳಿತದ ಚುಕ್ಕಾಣಿ ಹಿಡಿದಿತ್ತು.

ಕರೊನಾ ಅಲೆ ಇರುವುದರಿಂದ ಪ್ರಮಾಣವಚನ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಕೇವಲ 500 ಜನಕ್ಕೆ ಮಾತ್ರ ಕಾರ್ಯಕ್ರಮಕ್ಕೆ ಭಾಗವಹಿಸಲು ಅವಕಾಶ ನೀಡಲಾಗಿತ್ತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ 11 ಮಂದಿ ಸಂಪುಟ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು