News Karnataka Kannada
Monday, April 22 2024
Cricket
ವಿದೇಶ

ಐದು ಕೋಟಿ ಮೌಲ್ಯದ ಅಕ್ರಮ ಡ್ರಗ್ಸ್ ವಶ; ಇಬ್ಬರ ಬಂಧನ

Photo Credit :

ಐದು ಕೋಟಿ ಮೌಲ್ಯದ ಅಕ್ರಮ ಡ್ರಗ್ಸ್ ವಶ;  ಇಬ್ಬರ ಬಂಧನ

ಜೈಪುರ, ರಾಜಸ್ಥಾನದ ಅಜ್ಮೇರ್‌ನಲ್ಲಿ ಪೊಲೀಸರು 5.52 ಕೋಟಿಗೂ ಅಧಿಕ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಮಾತ್ರೆ, ಕ್ಯಾಪ್ಸುಲ್ ಹಾಗೂ ಇಂಜೆಕ್ಷನ್‌ಗಳನ್ನು ಸೇರಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್‌ನ ಗೋದಾಮು ಒಂದರಲ್ಲಿ ಇವುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಜ್ಮೇರ್ ಪೊಲೀಸ್ ಅಧಿಕಾರಿ ಮುಖೇಶ್ ಸೋನಿ ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗ್ರಾಹಕರ ರೂಪದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.
“ಈ ಪ್ರಕರಣದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಪಡೆದುಕೊಂಡ ನಂತರ ಅಲ್ವಾರ್ ಗೇಟ್ ಪೊಲೀಸರು ದಾಳಿಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶೇಕ್ ಸಾಜಿದ್ ಮತ್ತು ಶ್ಯಾಮ್ ಸುಂದರ್ ಮುಂದ್ರಾ ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅವರಿಂದ ಐದು ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ” ಎಂದು ಮುಖೇಶ್ ಸೋನಿ ತಿಳಿಸಿದ್ದಾರೆ. “ಪ್ರಕರಣದ ಆರೋಪಿಗಳಿಂದ ಒಟ್ಟು 5.53 ಕೋಟಿ ರೂಪಾಯಿ ಮೌಲ್ಯದ ಮಾತ್ರೆಗಳು, ಕ್ಯಾಪ್ಸುಲ್ ಮತ್ತು ಇಂಜೆಕ್ಷನ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಇನ್ನು ಕೂಡ ಬಂಧಿಸಲಾಗಿಲ್ಲ. ಆತನ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು