News Karnataka Kannada
Thursday, April 18 2024
Cricket
ವಿದೇಶ

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್

Photo Credit :

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರಕ್ಕೆ ಆಯ್ಕೆಯಾಗಿರುವ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಇಂದು(ಸೋಮವಾರ) ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಪ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು