News Karnataka Kannada
Thursday, April 18 2024
Cricket
ವಿದೇಶ

ಕರೊನಾ ತಡೆಯಲು ಲಾಕ್​ಡೌನ್ ಮಾಡಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸಲಹೆ

Photo Credit :

ಕರೊನಾ  ತಡೆಯಲು  ಲಾಕ್​ಡೌನ್  ಮಾಡಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸಲಹೆ

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸರಪಳಿಯನ್ನು ಮುರಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್​ಡೌನ್​ ಅನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂಕೋರ್ಟ್​ ಭಾನುವಾರ ಸಲಹೆ ನೀಡಿದೆ.
ಕರೊನಾ ಎರಡನೇ ಅಲೆಯನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ದೇಶದ ಉನ್ನತ ನ್ಯಾಯಾಲಯ ಈ ಆದೇಶವನ್ನು ಮಾಡಿದೆ.
ದೇಶದಲ್ಲಿ ಕರೊನಾ ಪ್ರಕರಣಗಳ ಏರಿಕೆ ಮುಂದುವರಿದಿದ್ದು, ವೈರಸ್​ ಹರಡುವುದನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳನ್ನು ದಾಖಲೆ ರೂಪದಲ್ಲಿಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡುತ್ತೇವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಅವರು ತೆಗೆದುಕೊಳ್ಳಲು ಯೋಜಿಸುವ ಕ್ರಮಗಳನ್ನು ಸಹ ದಾಖಲಿಸಿ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಸಾಮೂಹಿಕ ಸಭೆ ಮತ್ತು ಕರೊನಾ ವೇಗವಾಗಿ ಹರಡಲು ಕಾರಣವಾಗುವ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಸಂಪೂರ್ಣ ಬ್ಯಾನ್​ ಮಾಡಿ. ಸಾರ್ವಜನಿಕ ಹಿತಾಸಕ್ತಿಯಿಂದ ಕರೊನಾ ಎರಡನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್​ ಅನ್ನು ಗಂಭೀರವಾಗಿ ತೆಗೆದುಕೊಳ್ಳಲು ಇದೇ ಸಂದರ್ಭದಲ್ಲಿ ಕೇಳಿಕೊಳ್ಳುತ್ತೇವೆಂದು ಸುಪ್ರೀಂಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿದೆ.ಬಡ ಸಮುದಾಯಗಳ ಮೇಲೆ ಲಾಕ್‌ಡೌನ್‌ನ ಸಾಮಾಜಿಕ ಹಾಗೂ ಆರ್ಥಿಕ ಪ್ರಭಾವದ ಬಗ್ಗೆ ನಾವು ನಿರ್ದಿಷ್ಟವಾಗಿ ತಿಳಿದಿದ್ದೇವೆ. ಲಾಕ್‌ಡೌನ್ ಹೇರುವ ಮುನ್ನ ಈ ಸಮುದಾಯಗಳ ಅಗತ್ಯತೆಗಳನ್ನು ಪೂರೈಸಲು ಮೊದಲೇ ವ್ಯವಸ್ಥೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಭಾರತದಲ್ಲಿ ಭಾನುವಾರ 3.92 ಲಕ್ಷ ಹೊಸ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅದೇ ಸಮಯದಲ್ಲಿ ವೈರಸ್ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,689 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಪ್ರಕರಣಗಳಲ್ಲಿನ ಈ ತೀಕ್ಷ್ಣವಾದ ಉಲ್ಬಣವು ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ಭಾರಿ ಒತ್ತಡವನ್ನು ಬೀರುತ್ತಿದೆ. ಇದರ ಪರಿಣಾಮವಾಗಿ ಆಸ್ಪತ್ರೆಯ ಹಾಸಿಗೆಗಳು ಮತ್ತು ವೈದ್ಯಕೀಯ ಆಮ್ಲಜನಕ ಸಂಬಂಧಿತ ಉಪಕರಣಗಳ ಕೊರತೆ ಉಂಟಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು