News Karnataka Kannada
Tuesday, April 16 2024
Cricket
ವಿದೇಶ

ಕೆನಡಾದ ಟೊರೊಂಟೊ ನಗರಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿಯ ಹತ್ಯೆ!

Canada
Photo Credit :

ಕೆನಡಾದ ಟೊರೊಂಟೊ ನಗರದ ಸುರಂಗಮಾರ್ಗ ನಿಲ್ದಾಣದ ಪ್ರವೇಶದ್ವಾರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ನಡೆದಿದೆ.

ಉತ್ತರಪ್ರದೇಶದ ಗಾಜಿಯಾಬಾದ್‌ ಮೂಲದ ಕಾರ್ತಿಕ್‌ ವಾಸುದೇವ್(‌21), ಮೃತ ವಿದ್ಯಾರ್ಥಿ  ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂದ ಟೊರೆಂಟೊ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಾಸುದೇವ್‌ ಭಾರತದಿಂದ ಕೆನಡಾಗೆ ಜನವರಿಯಲ್ಲಿ ತಮ್ಮ ವಿದ್ಯಾಭ್ಯಾಸಕ್ಕೆಂದು ಬಂದಿದ್ದರು, ಇಲ್ಲಿನ ಸೆನೆಕಾ ಕಾಲೇಜಿನಲ್ಲಿ ಮಾರ್ಕೆಟಿಂಗ್‌ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿ ಸಾವಿಗೆ ರಾಯಭಾರಿ ಕಚೇರಿ ಹಾಗೂ ಕಾಲೇಜು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.

“ಕಾರ್ತಿಕ್ ವಾಸುದೇವ್ ಅವರ ಹತ್ಯೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ದುಃಖಿತರಾಗಿದ್ದೇವೆ” ಎಂದು ಭಾರತೀಯ ರಾಯಭಾರ ಕಚೇರಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ನಾವು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪಾರ್ಥಿವ ಶರೀರ ರವಾನೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದೆ.

ವಾಸುದೇವ್‌ ಹತ್ಯೆಗೆ ವಿದೇಶಾಂಗ ಸಚಿವ ಜೈ ಶಂಕರ್‌ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ದುರಂತ ಘಟನೆಯಿಂದ ದುಃಖವಾಗಿದೆ. ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು