News Karnataka Kannada
Thursday, April 25 2024
ವಿದೇಶ

ಕೇಂದ್ರ ಸಚಿವ ಡಾ. ಹರ್ಷವರ್ಧನ ಅವರ ತಾಯಿ ನಿಧನ

Photo Credit :

ಕೇಂದ್ರ ಸಚಿವ ಡಾ. ಹರ್ಷವರ್ಧನ ಅವರ ತಾಯಿ ನಿಧನ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ತಾಯಿ ಸ್ನೇಹಲತಾ ಗೋಯೆಲ್ (89) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು.

ತಾಯಿಯ ಅಪೇಕ್ಷೆಯಂತೆ ಅವರ ಕಣ್ಣುಗಳನ್ನು ಅಖಿಲ ಭಾರತ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಾಗೂ ಅವರ ದೇಹವನ್ನು ಮೌಲಾನಾ ಅಝಾದ್ ವೈದ್ಯಕೀಯ ಕಾಲೇಜಿಗೆ ದಾನ ಮಾಡುವುದಾಗಿ ಸಚಿವರು ಟ್ವೀಟ್‌ ಮಾಡಿದ್ದಾರೆ. ತಮ್ಮ ತಾಯಿಯವರ ದೇಹದಾನದ ಕ್ರಮ ಸಮಾಜಕ್ಕೆ ಸ್ಫೂರ್ತಿಯಾಗಲಿ ಎಂದು ಅವರು ಹೇಳಿದ್ದಾರೆ.

ನಾನು ಅತ್ಯಂತ ಪ್ರೀತಿಸುತ್ತಿದ್ದ ವ್ಯಕ್ತಿ ನನ್ನ ತಾಯಿ. ಈಗ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರದು ಬಹಳ ಅತ್ಯುನ್ನತ ವ್ಯಕ್ತಿತ್ವ. ಅವರೊಬ್ಬ ತತ್ವಜ್ಞಾನಿ ಮತ್ತು ನನ್ನ ಮಾರ್ಗದರ್ಶಿಯಾಗಿದ್ದರು. ಅವರ ಅಗಲಿಕೆಯಿಂದ ನನಗೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು