News Karnataka Kannada
Sunday, April 14 2024
Cricket
ವಿದೇಶ

ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಯಡಿಯೂರಪ್ಪ

Photo Credit :

ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಯಡಿಯೂರಪ್ಪ

ಬೆಂಗಳೂರು: ಟಾಟಾ ನಗರದಿಂದ 6 ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲು ಮಂಗಳವಾರ ಬೆಳಗ್ಗೆ ಬೆಂಗಳೂರು ತಲುಪಿದ್ದು ಕೇಂದ್ರ ನಾಯಕರಿಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರಾದ ಪಿಯೂಷ್‌ ಗೋಯಲ್‌, ಸದಾನಂದ ಗೌಡ ಹಾಗೂ ಪ್ರಹ್ಲಾದ್‌ ಜೋಷಿ ಅವರಿಗೆ ಟ್ವೀಟ್‌ ಮೂಲಕ ಧನ್ಯವಾದ ಹೇಳಿದ್ದಾರೆ.
120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್‌ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗಾಗಿ ಕೇಂದ್ರ ಸಚಿವರುಗಳಾದ @DVSadanandGowda, @JoshiPralhad ಮತ್ತು @PiyushGoyal ಅವರಿಗೆ ಹಾಗೂ ನಿರಂತರವಾಗಿ ನಮಗೆ ಬೆಂಬಲವಾಗಿ ನಿಂತಿರುವ ಪ್ರಧಾನಿ ಶ್ರೀ @narendramodi ಜೀ ಅವರಿಗೆ ಧನ್ಯವಾದಗಳು. #Unite2FightCorona pic.twitter.com/G5DPSOOSL7
— CM of Karnataka (@CMofKarnataka) May 11, 2021
120 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್‌ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗೆ ಸಹಕರಿಸಿದ ಕೇಂದ್ರ ಸಚಿವರುಗಳು ಹಾಗೂ ರಾಜ್ಯದ ಅಭಿವೃದ್ಧಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು