News Karnataka Kannada
Wednesday, April 24 2024
Cricket
ವಿದೇಶ

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್

Photo Credit :

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿಗೆ ನಿಗದಿಪಡಿಸಿದ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಸರಬರಾಜು ಮಾಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಶನಿವಾರ(ಮೇ 01) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

 

ಕೋವಿಡ್ ತುರ್ತು ಪರಿಸ್ಥಿತಿ ಘೋಷಿಸಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ನಿಯಂತ್ರಣಕ್ಕೆ ಪಡೆಯಲಿ. ಆದರೆ, ಕೇಂದ್ರ ಸರ್ಕಾರ ದೆಹಲಿಗೆ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಹಂಚಿಕೆ ಮಾಡಿದೆ, ಅದನ್ನು ನೀವು(ಕೇಂದ್ರ) ಪೂರೈಕೆ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಪೀಠ ತಿಳಿಸಿದೆ.

 

ಈ ಆದೇಶವನ್ನು ಸೋಮವಾರದವರೆಗೆ ಅಥವಾ ಅರ್ಧ ಗಂಟೆವರೆಗೆ ಮುಂದೂಡಬೇಕೆಂಬ ಕೇಂದ್ರದ ಮನವಿಯನ್ನೂ ಪೀಠ ನಿರಾಕರಿಸಿತ್ತು. ಅಂದರೆ ದೆಹಲಿಯಲ್ಲಿ ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕೇ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರದ ಮನವಿಯನ್ನು ತಳ್ಳಿ ಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು